

ಚಿತ್ರದುರ್ಗ:ಬಿಪಿಎಲ್ ಕಾರ್ಡ್‌ಗಳ ಪರಿಶೀಲನೆ ನಡೆದಿದ್ದು,ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳು ಮಾತ್ರ ರದ್ದಾಗುತ್ತವೆ ಎಂದು ಮು ಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರೂ, ರಾಜಕಾರಣಕ್ಕಾಗಿ ಕೂಗೆಬ್ಬಿಸಲಾಗುತ್ತಿದೆ ಎಂದು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಜಿಲ್ಲಾಉ ಸ್ತುವಾರಿ ಸಚಿವ ಡಿ.ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ,ರಾಜ್ಯ ಸರ್ಕಾರ ಬಡವರ ಅನ್ನ ಕಸಿದುಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ತಳ್ಳಿಹಾಕಿದರು. ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ,ದಿನಕ್ಕೊಂದು ಆರೋಪ ಮಾಡುತ್ತಿದ್ದಾರೆ. ಸಚಿವ ಜಮೀರ್ ಅಹಮದ್,ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ವಿರುದ್ಧದ ಹೇಳಿಕೆ ಮುಗಿದ ಅಧ್ಯಾಯವೆಂದು ಪ್ರತಿಕ್ರಿಯಿಸಲು ನಿರಾಕರಿಸಿದರು. ವಿಧಾನಸಭೆ ಉಪಚುನಾವಣೆ ಫಲಿತಾಂಶ ಸದ್ಯದಲ್ಲೇ ಗೊತ್ತಾಗಲಿದ್ದು,ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಗೆಲುವು ನೂರಕ್ಕೆ ನೂರು ಖಚಿತವೆಂದರು.
----