ಬಿಜೆಪಿಯವರಿಗೆ ಸ್ವಾತಂತ್ರ್ಯ ಹೋರಾಟದ ಅರಿವಿಲ್ಲ; ಉಮಾಶ್ರೀ

Published on

ಹುಬ್ಬಳ್ಳಿ: ಬಿಜೆಪಿಯವರಿಗೆ ಸ್ವಾತಂತ್ರ್ಯ ಹೋರಾಟಕ್ಕಾಗಿ ನಡೆದ ತ್ಯಾಗ, ಬಲಿದಾನದ ಅರಿವು ಇಲ್ಲ. ಹಾಗಾಗಿಯೇ ರಾಷ್ಟ್ರಧ್ವಜದ ಬಗ್ಗೆ ಮನಬಂದಂತೆ ನಿಯಮಗಳನ್ನು ರೂಪಿಸುತ್ತಾರೆ ಎಂದು ಮಾಜಿ ಸಚಿವೆ, ಚಲನಚಿತ್ರ ನಟಿ ಉಮಾಶ್ರೀ ಅಸಮಾಧಾನ ವ್ಯಕ್ತಪಡಿಸಿದರು. ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ ವಿರೋಧಿಸಿ ಹಾಗೂ ಹಿಂಪಡೆಯುವಂತೆ ಹುಬ್ಬಳ್ಳಿಯ ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net