ಬಿಜೆಪಿಯಿಂದ ಅಂಬೇಡ್ಕರ್‌ಗೆ ಗೌರವ

26Rajesh7
Published on

ಚಾಮರಾಜನಗರ: ದೇಶದ ಪ್ರಗತಿಗೆ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಬರೆದುಕೊಟ್ಟ ಸಂವಿಧಾನ ಕಾರಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮುಂದುವರಿದ ದೇಶಗಳ ಪೈಕಿ ಭಾರತವನ್ನು ಕಾಣಬಹುದಾಗಿದ್ದು, ಇದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದುಕೊಟ್ಟ ಅತ್ಯುತ್ತಮ ಸಂವಿಧಾನ ಕಾರಣ ಎಂದರು. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಗೌರವಾರ್ಥವಾಗಿ ಐದು ಸ್ಥಳಗಳನ್ನು ಪಂಚ ತೀರ್ಥ ಎಂದು ಅಭಿವೃದ್ಧಿಪಡಿಸುವ ಮೂಲಕ ಅವರಿಗೆ ಗೌರವ ತಂದು ಕೊಟ್ಟಿದೆ. ಇಡೀ ದೇಶವೇ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದೆ ಎಂದು ಹೇಳಿದರು.

ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರು, ರಾಷ್ಟ್ರೀಯ ಹಿಂದುಳಿದ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್, ನಿಜಗುಣರಾಜು, ವೃಷಭೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಚೂಡಾ ಮಾಜಿ ಅಧ್ಯಕ್ಷ ಬಾಲಸುಬ್ರಹ್ಮಣ್ಯ, ನಗರ ಮಂಡಲ ಅಧ್ಯಕ್ಷ ಶಿವರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಅರಕಲವಾಡಿ ಮಹೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net