

ಚಿತ್ರದುರ್ಗ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ‌್ಯಕರ್ತರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಪಕ್ಷದ ಎಸ್‌ಟಿ ಮೋರ್ಚಾ ನೇತೃತ್ವದಲ್ಲಿ ನಡೆಯುವ ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಶಾಸಕರು,ಮಾಜಿ ಶಾಸ ಕರು,ವಿಧಾನ ಪರಿಷತ್ ಸದಸ್ಯರ ಸಹಿತ ಪಕ್ಷದ ನಾನಾ ಪ್ರಮುಖರು ಭಾಗಿಯಾಗಲಿದ್ದಾರೆ.
ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. ಈ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಡಿಸಿ ಕಚೇರಿ ಹಾಗೂ ವೀರ ವನಿತೆ ಒನಕೆ ಓಬವ್ವ ವೃತ್ತದ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ರೂಪಿಸಿದ್ದಾರೆ.