ಬಿಜೆಪಿಯಿಂದ ಡಿಕೆ ಸಿದ್ರಾಮ ಉಚ್ಛಾಟನೆ

D K Sidram
Published on

ಬೀದರ್: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ನಾರಂಜಾ ಸಹಕಾರ ಸಕ್ಕರೆ ಕಾಖರ್ಾನೆ ಅಧ್ಯಕ್ಷರೂ ಆದ ಭಾಲ್ಕಿ ಕ್ಷೇತ್ರದ ಮುಖಂಡ ಡಿ.ಕೆ. ಸಿದ್ರಾಮ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದ ಪಕ್ಷದ ಅಧಿಕೃತ ಅಭ್ಯಥರ್ಿ ವಿರುದ್ಧ ಪಕ್ಷವಿರೋಧಿ ಚಟುವಟಿಕೆ ನಡೆಸಿರುವುದಕ್ಕೆ ಕಾರಣ ಕೇಳಿ ನೋಟಿಸ್ ನೀಡಿದ್ದು, ನೀವು ಕೊಟ್ಟಿರುವ ಸ್ಪಷ್ಟೀಕರಣ ವಸ್ತುನಿಷ್ಠವಾಗಿಲ್ಲ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಆರು ವರ್ಷ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಡಿ.ಕೆ. ಸಿದ್ರಾಮ ಸೇರಿ ಹಲವರ ವಿರುದ್ಧ ದೂರು ನೀಡಲಾಗಿತ್ತು. ಅಲ್ಲದೆ ಔರಾದ್ ಕ್ಷೇತ್ರದಲ್ಲಿ ಪ್ರಕಾಶ ಟೊಣ್ಣೆ, ಬಂಡೆಪ್ಪ ಕಂಟೆ ಸೇರಿ 33 ಮುಖಂಡರನ್ನು ಉಚ್ಚಾಟಿಸುವ ಕುರಿತು ಮಂಡಲ್ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಿ ಜಿಲ್ಲಾ ಸಮಿತಿಗೆ ಶಿಫಾರಸು ಮಾಡಲಾಗಿತ್ತು. ಇದರಲ್ಲಿ ಬಹುತೇಕರು ಕೇಂದ್ರ ಸಚಿವ ಭಗವಂತ ಖೂಬಾ ಬೆಂಬಲಿಗರು ಇರುವುದು ಗಮನಾರ್ಹ. ಸದ್ಯ ಡಿ.ಕೆ. ಸಿದ್ರಾಮ ಉಚ್ಚಾಟನೆಗೊಂಡಿದ್ದು, ಬರುವ ದಿನಗಳಲ್ಲಿ ಇನ್ನೂ ಯಾರ್ಯಾರ ಉಚ್ಚಾಟನೆ ಆಗುತ್ತದೆಯೋ ಕಾದುನೋಡಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net