ಬಿಜೆಪಿಯಿಂದ ನೀಚ, ಹೇಡಿತನದ ಕೆಲಸ

siddaramaiah-dh-1011992-162704051016643643631676463371
Published on

ಹುಬ್ಬಳ್ಳಿ: ಕಾಂಗ್ರೆಸ್ ನೇತಾರ ರಾಹುಲ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹಗೊಳಿಸಿರುವ ಈ ದಿನ ಪ್ರಜಾಪ್ರಭುತ್ವದ ಕರಾಳ ದಿನ. ಇದು ಬಿಜೆಪಿಯ ನೀಚ ಮತ್ತು ಹೇಡಿತನದ ಕೆಲಸ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಅವರನ್ನು ಎದುರಿಸಲಾಗದೇ ಬಿಜೆಪಿಯವರು ಷಡ್ಯಂತ್ರ ನಡೆಸಿದ್ದಾರೆ. ದೇಶದ ಸಂಪತ್ತನ್ನು ಲೂಟಿ ಮಾಡಿ ವಿದೇಶಕ್ಕೆ ಓಡಿ ಹೋದ ನೀರವ ಮೋದಿ, ಲಲಿತ ಮೋದಿ, ವಿಜಯ ಮಲ್ಯ ಅವರನ್ನು ಏನೆಂದು ಕರೆಯಬೇಕು? ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಇಲ್ವಾ? ಸತ್ಯ ಹೇಳಿದರೆ ಬಿಜೆಪಿಯವರಿಗೆ ಅರಗಿಸಿಕೊಳ್ಳಲು ಆಗುವುದಿಲ್ಲ ಎಂದರು.

ರಾಹುಲ್ ಗಾಂಧಿ ಸತ್ಯ ಹೇಳಬಾರದು ಎಂದು ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಸೂರತ್ ನ್ಯಾಯಾಲಯ ರಾಹುಲ್​ಗೆ 2 ವರ್ಷ ಶಿಕ್ಷೆ ವಿಧಿಸಿದರೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಲೂಟಿ ಹೊಡೆದವರನ್ನು ರಕ್ಷಣೆ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್​ಗೆ ಬಿಟ್ಟಿದ್ದೇನೆ. ಸುಮಾರು 20-25 ಕ್ಷೇತ್ರಗಳ ಕಾರ್ಯಕರ್ತರು, ಅಭಿಮಾನಿಗಳು ಸ್ಪರ್ಧೆ ಮಾಡುವಂತೆ ಕರೆಯುತ್ತಿದ್ದಾರೆ. ಎಲ್ಲ ಕಡೆಯಿಂದ ಸ್ಪರ್ಧಿಸಲು ಆಗುವುದಿಲ್ಲ. ನನಗೆ ಕ್ಷೇತ್ರ ಸಿಗುತ್ತಿಲ್ಲ ಎಂಬ ಪ್ರಶ್ನೆಯೇ ಇಲ್ಲ. ಸಿಗುತ್ತಿಲ್ಲ ಎಂದಾದರೆ 20-25 ಕಡೆ ಯಾಕೆ ಕರಿತಾರೆ? ಸೋಲುವವರನ್ನು ಕರೆಯುತ್ತಾರಾ? ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net