ಬಿಜೆಪಿಯಿಂದ ಪರಿಶಿಷ್ಟ ವರ್ಗಕ್ಕೆ ಯಾವುದೇ ಉಪಯೋಗವಾಗಿಲ್ಲ

22-GPT-2
Published on

ಗುಂಡ್ಲುಪೇಟೆ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಯಾವುದೇ ಉಪಯೋಗವಾಗಿಲ್ಲ ಎಂದು ಮಾಜಿ ಸಂಸದ ಎ.ಸಿದ್ದರಾಜು ಆಕ್ರೋಶ ವ್ಯಕ್ತಪಡಿಸಿದರು.


ಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಎಸ್‌ಸಿ ವರ್ಗದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಕಳೆದ ಐದು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಹಿಂದುಳಿದ ಹಾಗೂ ಪರಿಶಿಷ್ಟ ವರ್ಗದ ಜನರಿಗೆ ಯಾವುದೇ ಉಪಯೋಗವಾಗಿಲ್ಲ. ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.


ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡಿದ್ದರಿಂದ ಬಡವರ ಬದುಕು ನರಕವಾಗಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗ್ಯಾರೆಂಟಿ ಕಾರ್ಡ್‌ನಲ್ಲಿ ಹೇಳಿರುವ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದು ಹೇಳಿದರು.

ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುನಿರಾಜು, ರಾಜಶೇಖರ್, ಎಸ್.ಆರ್.ಎಸ್.ರಾಜಶೇಖರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net