ಬಿಜೆಪಿಯೇ ಹಣದ ಹೊಳೆ ಹರಿಸುತ್ತದೆ

ishwar khandre
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಚುನಾವಣೆಯಲ್ಲಿ ಹಣದ ಹೊಳೆ ಹರಿಸುವವರು ಬಿಜೆಪಿಯವರು. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಹುಬ್ಬಳ್ಳಿಯಲ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, ಭ್ರಷ್ಟಾಚಾರ ಮಾಡುವವರು ಬಿಜೆಪಿಯವರು. ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಪ್ರಶ್ನಿಸಿದರು. ಕೋವಿಡ್ ಸಂದರ್ಭದಲ್ಲಿ ಬಿಜೆಪಿಯವರು ಸಾಕಷ್ಟು ಹಗರಣ ಮಾಡಿದ್ದಾರೆ. ರಾಜ್ಯದಲ್ಲಿ 50 ಸಾವಿರ ಜನ ಸಾವನ್ನಪ್ಪಿದ್ದರು. ಆದರೆ, ಅವರು ಲೆಕ್ಕ ಕೊಟ್ಟಿದ್ದು 4 ಸಾವಿರ ಜನ ಎಂದು, ಕೋವಿಡ್ ಸಂದರ್ಭದ ಅಕ್ರಮಗಳ ಕುರಿತು ತನಿಖೆ ಮಾಡಲು ಎಸ್​ಐಟಿ ರಚಿಸಲಾಗಿದೆ. ಈಗಾಗಲೇ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದರು.

ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯು ಅಭಿವೃದ್ಧಿ ಮತ್ತು ಅಭಿವೃದ್ಧಿ ಶೂನ್ಯದ ನಡುವಿನ ಹಣಾಹಣಿಯಾಗಿದೆ. ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗಲೂ ಶಿಗ್ಗಾಂವ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿರಲಿಲ್ಲ. ಬಿಜೆಪಿ ಕೊಟ್ಟ ಮಾತಿನಂತೆ ಎಂದೂ ನಡೆದುಕೊಂಡಿಲ್ಲ. ಅವರು ವಚನಭ್ರಷ್ಟರು, ನಾವು ನುಡಿದಂತೆ ನಡೆದಿದ್ದೇವೆ. ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net