

ಬಾಗಲಕೋಟೆ: ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶಾಸಕ ಎಚ್.ವೈ.ಮೇಟಿ ಅವರನ್ನು ಎರಡು ವರ್ಷದ ಅವಽಗೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮೇರೆಗೆ ಜಲ ಸಂಪನ್ಮೂಲಕ ಇಲಾಖೆ ಅಧೀನ ಕಾರ್ಯದರ್ಶಿ ವಿಜಯಲಕ್ಷ್ಮಿ ಎಸ್. ಆದೇಶ ಹೊರಡಿಸಿದ್ದಾರೆ.
ಕಳೆದ ವಾರ ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಗೆ ಸರ್ಕಾರದಿಂದ ಆದೇಶವಾಗಿತ್ತು. ಇದು ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರ ಶಿಫಾರಸ್ಸು ಮೇರೆಗೆ ಜಲಸಂಪನ್ಮೂಲ ಇಲಾಖೆ ಆದೇಶ ಹೊರಡಿಸಿದ್ದು, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಶಾಸಕ ಎಚ್.ವೈ.ಮೇಟಿ ಎರಡನೇ ಸಾರಿ ನೇಮಕವಾಗಿದ್ದಾರೆ.