

ಯಾದಗಿರಿ: ರಾಜ್ಯದಲ್ಲಿ ಚುನಾವಣೆ ಮುಗಿದು 4 ತಿಂಗಳು ಕಳೆದರೂ ರಾಜ್ಯ ಸರಕಾರ ಇನ್ನು ಅಭಿವೃದ್ಧಿಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.
ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ವಿಧಾನ ಪರಿಷತ್ತಿನ ಈಶಾನ್ಯ ಪದವಿಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕರೆದಿದ್ದ ಮುಖಂಡರ, ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರಕಾರದ ಬಿಟ್ಟಿ ಭಾಗ್ಯಗಳಿಂದ ನಾಡಿನ ಪ್ರಗತಿ ಸಾಧ್ಯವಿಲ್ಲ. ಈಗ ಘೋಷಣೆ ಮಾಡಿರುವ ಗ್ಯಾರಂಟಿಗಳ ಲಾಭ ಕೆಲವರಿಗಷ್ಟೇ ಉಪಯೋಗವಾಗುತ್ತಿದೆ ಎಂದು ವ್ಯಂಗ್ಯವಾಡಿದರು.
ಈ ಸರಕಾರದಲ್ಲಿ ಒಂದು ಸಣ್ಣ ರಸ್ತೆ ಮಾಡಬೇಕಾದರೆ ಅನುದಾನವಿಲ್ಲ. ಅಲ್ಲದೆ, ಹಿಂದಿನ ಬಿಜೆಪಿ ಸರಕಾರಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿ ಸಾವಿರಾರು ಕೋಟಿ ರೂ. ಮಂಜೂರು ಮಾಡಲಾಗುತ್ತಿತ್ತು. ಆದರೆ ಈಗ ಒಬ್ಬ ಶಾಸಕರಿಗೂ 50 ಲಕ್ಷ ರೂ. ಅನುದಾನ ದೊರಕುತ್ತಿಲ್ಲ. ಇದೆಂಥ ಸರಕಾರ ಎಂದು ಖಾರವಾಗಿ ಪ್ರಶ್ನಿಸಿದ ಅವರು, ಸಕರ್ಾರದ ಹಣಕಾಸು ಸ್ಥಿತಿ ಸರಿಯಿಲ್ಲ ಎಂದು ಹೇಳಿದರು.
ವಿಧಾನ ಪರಿಷತ್ತು ಮತ್ತು ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳನ್ನು ಮನೆಗೆ ಮನೆಗೆ ತಲುಪಿಸಬೇಕು. ಪಕ್ಷವನ್ನು ತಳಮಟ್ಟದಿಂದ ಸಂಘಟನೆಗೆ ಮಾಡಲು ಹೆಚ್ಚಿನ ಒತ್ತು ಕೊಡಬೇಕು. ಹಿಂದಿನ ಎಂಎಲ್ಸಿ ಚುನಾವಣೆಯಲ್ಲಿ ನಮ್ಮ ಅಭ್ಯಥರ್ಿ ಸೋತಿರಬಹುದು. ಸೋಲು-ಗೆಲುವು ಸಹಜ. ಆದರೆ ಈ ಬಾರಿ ಗೆಲವು ನಮ್ಮದಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ಮಾತನಾಡಿ, ಚಂದ್ರಯಾನ-3ರ ಯಶಸ್ಸಿನ ಬಳಿಕ ಇಸ್ರೊದ ಬಹು ನಿರೀಕ್ಷಿತ ಸೂರ್ಯಯಾನ ಯೋಜನೆಯ ಬಾಹ್ಯಾಕಾಶ ನೌಕೆ ಆದಿತ್ಯ ಎಲ್-1 ಇಂದು ಉಡಾವಣೆಯಾಗಿದೆ. ಆದಿತ್ಯ ಎಲ್-1 ನೌಕೆ ನಭಕ್ಕೆ ಚಿಮ್ಮಿದೆ ಕಾರಣ ವಿಜ್ಞಾನಿಗಳಿಗೆ ಅಭಿನಂದನಾ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದರು.