ಬಿಡುಗಡೆಗೊಳಿಸದ ಕ್ರಮಕ್ಕೆ ಖಂಡನೆ

Karave
Published on

ಚಿತ್ರದುರ್ಗ: ಬೆಂಗಳೂರಿನಲ್ಲಿ ಈಚೆಗೆ ಕನ್ನಡ ಕಡ್ಡಾಯ ಅಭಿಯಾನದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಇನ್ನಿತರ ಕಾರ್ಯಕರ್ತರನ್ನು ಬಂಧಿಸಿ 5 ದಿನ ಕಳೆದರೂ ರಾಜ್ಯ ಸರ್ಕಾರ ಬಿಡುಗಡೆಗೊಳಿಸಲು ನಿರ್ಧರಿಸದ ಕ್ರಮ ಖಂಡಿಸಿ ಕರವೇ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಮಂಗಳವಾರ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.

ವೇದಿಕೆ ಜಿಲ್ಲಾ ಅಧ್ಯಕ್ಷ ಟಿ.ರಮೇಶ್, ಮಹಿಳಾ ಅಧ್ಯಕ್ಷೆ ಚಂದ್ರಕಲಾ, ಪದಾಧಿಕಾರಿಗಳಾದ ವಿಜಯಕುಮಾರ್, ಎಸ್.ಬಿ.ಗಣೇಶ್, ಜಿ.ರಾಜಪ್ಪ, ಘನಶ್ಯಾಮ್, ಪ್ರಸಾದ್ ಮಲ್ಲ, ಬಿ.ವೆಂಕಟೇಶ್, ಟಿ.ಕೆ.ಶಿವಮೂರ್ತಿ, ಆರ್.ಜಿ.ಲಕ್ಷ್ಮ್ಮಣ, ರಮೇಶ್, ಜಯಲಕ್ಷ್ಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net