ಬಿತ್ತನೆ ಬೀಜ ವಿತರಣೆಗೆ ಸಿದ್ಧತೆ

11arsph1ep
ಅರಸೀಕೆರೆ ತಾಲೂಕಿನ ವಿವಿಧೆಡೆ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿರುವುದು.
Published on

ಅರಸೀಕೆರೆ: ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಸೇರಿ ಕೃಷಿ ಪರಿಕರ ಒದಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎ.ಪಿ.ಶಿವಕುಮಾರ್ ತಿಳಿಸಿದ್ದಾರೆ.

ಹೆಸರು, ಉದ್ದು, ಎಳ್ಳು, ಮುಸುಕಿನ ಜೋಳ, ತೊಗರಿ, ಅಲಸಂದೆ, ಸೂರ್ಯಕಾಂತಿ, ಹತ್ತಿ ಸೇರಿ ಪ್ರಮುಖ ಬೆಳೆಗಳನ್ನು ರೈತರು ಮುಂಗಾರಿನಲ್ಲಿ ಬಿತ್ತನೆ ಮಾಡಲಿದ್ದಾರೆ. ಪ್ರಸ್ತುತ 200 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ ಪೂರ್ಣಗೊಂಡಿದೆ. ಪೂರ್ವ ಮುಂಗಾರು ಕೊಂಚ ವಿಳಂಬವಾಗಿದ್ದು ಸಾಮಾನ್ಯ ವರ್ಗದ ರೈತರಿಗೆ ಶೇ.50 ಹಾಗೂ ಪರಿಶಿಷ್ಟ ಜಾತಿ ಹಾಗೂ ಪ.ಪಂಗಡದ ವರ್ಗದವರು ಶೇ.75 ಸಹಾಯಧನದಲ್ಲಿ ಬೇಡಿಕೆಗೆ ಅನುಗುಣವಾಗಿ ವಿತರಿಸಲಾಗುತ್ತಿದೆ. ಆದ್ದರಿಂದ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net