ಬಿರುಗಾಳಿ ಮಳೆಗೆ ಬಾಳೆ ನಾಶ

14 04
Published on

ಬುಕ್ಕಾಪಟ್ಟಣ: ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿಯಲ್ಲಿ ಶನಿವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಫಸಲಿಗೆ ಬಂದಿದ್ದ ಬಾಳೆ ಗಿಡಗಳು ಮುರಿದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಬುಕ್ಕಾಪಟ್ಟಣ ಹೋಬಳಿ ಮಂಗನಹಳ್ಳಿಯ ಸರ್ವೇ ನಂ.4ರಲ್ಲಿ ಕೆ.ಜಿ.ಗುರುರಾಜು ಅವರ ಒಂದುವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಗಿಡಗಳು ನೆಲಕ್ಕರುಳಿವೆ. ಸ್ಥಳಕ್ಕೆ ಕಂದಾಯ ಅಧಿಕಾರಿ ಭುವನ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net