ಬಳ್ಳಾರಿ : ಸಿರುಗುಪ್ಪ ತಾಲೂಕಿನ ದರೂರು ಗ್ರಾಮದಲ್ಲಿ ಗುರುವಾರ ಸಂಜೆ ಬೀಸಿದ ಬಿರುಗಾಳಿಗೆ ಮೊಬೈಲ್ ಟವರ್ ಧರೆಗೆ ಉರುಳಿ ರಸ್ತೆಯಲ್ಲಿ ಅಡ್ಡಲಾಗಿ ಬಿದಿದ್ದೆ. ಇದಲ್ಲದೆ, ಗ್ರಾಮದ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬ ವಾಣಿಜ್ಯ ಮಳಿಗೆ ಮೇಲೆ ಉರುಳಿದೆ. ಕೂಡಲೇ, ವಿದ್ಯುತ್ ಸರಬರಾಜು ಇಲಾಖೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಯಾವುದೇ ಅವಘಡ ಸಂಭವಿಸಿಲ್ಲ. ಈ ಘಟನೆ ಸಿರಿಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.