ಬಿರುಗಾಳಿಗೆ ನೆಲ ಕಚ್ಚಿದ ಬಾಳೆ ಬೆಳೆ

17HDK005
Published on

ಎಚ್.ಡಿ.ಕೋಟೆ: ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಬಿರುಗಾಳಿಗೆ ಬಾಳೆ ಬೆಳೆ ನೆಲ ಕಚ್ಚಿದೆ.

ತಾಲೂಕಿನ ನಾಗನಹಳ್ಳಿ ಗ್ರಾಮದ ರೈತ ಬಾಲರಾಜ್ ಅವರ ಸುಮಾರು 2 ಎಕರೆ ಜಮೀನಿನಲ್ಲಿ ಫಲ ಕೊಡುವ ಹಂತದಲ್ಲಿದ್ದ ಬಾಳೆ, ಬಿರುಗಾಳಿಗೆ ಗೊನೆ ಸಮೇತ ನೆಲಕ್ಕೆ ಬಿದ್ದಿದೆ. ಕೊಯ್ಲಿಗೆ ಬಂದ ಬಾಳೆ ಬೆಳೆ ಕೈಗೆ ಸಿಗದಂತಾಗಿದೆ. ಪರಿಹಾರ ವಿತರಿಸಬೇಕು ಎಂದು ರೈತ ಬಾಲರಾಜ್ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net