

ಚಿಕ್ಕಮಗಳೂರು: ಜಿಲ್ಲಾ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಮತ್ತು ಬೆಂಗಳೂರಿನ ಯು.ಎಸ್. ಕಮ್ಯುನಿಕೇಶನ್ ಸಹಯೋಗದಲ್ಲಿ ಕಟ್ಟಡ ಸಾಮಗ್ರಿಗಳ ಇಂಟೀರಿಯರ್ಸ್, ಎಕ್ಸ್ ಟೀರಿಯರ್ಸ್, ಹೋಂ ಲೋನ್ ಮತ್ತು ಫರ್ನಿಚರ್ಸ್ ಒಳಗೊಂಡ ಬೃಹತ್ ವಸ್ತು ಪ್ರದರ್ಶನವನ್ನು ೨೦೨೫ರ ಜ. ೧೦ರಿಂದ ೧೨ರವರೆಗೆ ನಗರದ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಿ. ರಮೇಶ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಸ್ತು ಪ್ರದರ್ಶನದಲ್ಲಿ ಯಾವುದೇ ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿರುವುದಿಲ್ಲ. ಆದರೆ ಕಂಪನಿಗಳು ತಮ್ಮ ಉತ್ಪನ್ನಗಳನ್ನು ಜನರಿಗೆ ಪರಿಚಯಿಸುವ ಉz್ದೆÃಶದಿಂದ ಈ ಪ್ರದರ್ಶನ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.
ಕಟ್ಟಡಗಳ ನಿರ್ಮಾಣಕ್ಕೆ ಬೇಕಾದ ಉತ್ಕೃಷ್ಟ ಮಟ್ಟದ ವಸ್ತುಗಳು ಉತ್ಪಾದಕರಿಂದ ನೇರವಾಗಿ ಗ್ರಾಹಕರಿಗೆ ಸರಳ ಮತ್ತು ಸುಲಭವಾಗಿ ಕೈಗೆಟುಕುವಂತೆ ಮಾಡುವ ಉz್ದÉÃಶದಿಂದ ತಾಂತ್ರಿಕ ವಸ್ತು ಪ್ರದರ್ಶನ ಬಿಲ್ಡ್ ಟೆಕ್ ೨೦೨೫ ಆಯೋಜನೆ ಮಾಡಲಾಗಿದೆ. ಕಟ್ಟಡ ಸಾಮಗ್ರಿಗಳ ಬಗ್ಗೆ ಗೊಂದಲ ಹೊಂದಿರುವ ಮನೆ ಕಟ್ಟುವವರು ಈ ಪ್ರದರ್ಶನದಲ್ಲಿ ಭಾಗಿಯಾಗಿ ತಮಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಕಟ್ಟಡದ ಬುನಾದಿಯಿಂದ ಹಿಡಿದು ಮುಕ್ತಾಯದ ಹಂತದವರೆಗೆ ಉಪಯೋಗಿಸುವ ಎಲ್ಲಾ ಕಟ್ಟಡ ಸಾಮಗ್ರಿಗಳನ್ನು ಇಲ್ಲಿ ಕಾಣಬಹುದಾಗಿದೆ ಎಂದರು.
ವಿಶ್ವ ವಿಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾದ ಚಿಕ್ಕಮಗಳೂರು ಅಪಾರವಾದ ಪ್ರಾಕೃತಿಕ ಸೌಂದರ್ಯ ಹೊಂದಿದೆ. ಇಲ್ಲಿನ ಪ್ರವಾಸೋದ್ಯಮವನ್ನು ಸುಲಭ ಹಾಗೂ ಸರಳೀಕರಿಸಲು ಮತ್ತು ವ್ಯವಸ್ಥಿತವಾಗಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಿರುವ ಹೋಂಸ್ಟೇ ಮತ್ತು ರೆಸಾರ್ಟ್ ಮಳಿಗೆಗಳನ್ನು ಇಲ್ಲಿ ವಿಶೇಷವಾಗಿ ಪರಿಚಯಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಯು.ಎಸ್. ಕಮ್ಯುನಿಕೇಶನ್ ಮಾಲೀಕ ಉಮಾಪತಿ, ಜಿಲ್ಲಾ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಖಜಾಂಚಿ ಅಬ್ದುಲ್ ಕಬೀರ್ ಉಪಸ್ಥಿತರಿದ್ದರು.