ಬಿಳಿಗಿರಿರಂಗನಬೆಟ್ಟಕ್ಕೆ ಹರಿದು ಬಂದ ಭಕ್ತಗಣ

26 yelandur 01
Published on

ಯಳಂದೂರು: ಶ್ರಾವಣಮಾಸದ ಎರಡನೇ ಶನಿವಾರ ತಾಲೂಕಿನ ಪ್ರಸಿದ್ದ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಶ್ರಾವಣಮಾಸದ ಶನಿವಾರ ಬೆಳಿಗ್ಗೆಯಿಂದಲೇ ಬಿಳಿಗಿರಿರಂಗನಾಥಸ್ವಾಮಿ ಹಾಗೂ ಅಲಮೇಲಮ್ಮನವರಿಗೆ ವಿವಿಧ ಅಭಿಷೇಕಗಳನ್ನು ಮಾಡಿ, ತುಳಸಿ ಸೇರಿದಂತೆ ವಿವಿದ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಆ ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರಾವಣ ಮಾಸ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಇದರಿಂದ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಂಡುಬಂದರು. ಬೆಟ್ಟಕ್ಕೆ ಹೋಗಲು ಯಳಂದೂರು ಪಟ್ಟಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಬೆಟ್ಟದ ದೇವಸ್ಥಾನ, ಕಮರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಂಡು ಬಂದರು. ಜೊತೆಗೆ ರಥದ ಬೀದಿಯಲ್ಲಿ ಹೆಚ್ಚಿನ ಸಂಖ್ಯೆಯ ವಾಹನಗಳು ಕಂಡು ಬಂದಿತು. ದೇಗುಲದ ಸಮೀಪ ಇರುವ ಅನ್ನ ದಾಸೋಹದಲ್ಲಿ ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆಯನ್ನು ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net