

ಬಾಗೇಪಲ್ಲಿ: ಗಾನ ಗಾರುಡಿಗ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಜಿಲ್ಲೆಯ ಜನ ಕಂಬನಿ ಮಿಡಿದಿದ್ದು, ಎಸ್‌ಪಿಬಿ ಭೇಟಿ, ದೇಗುಲಗಳ ಅಭಿವೃದ್ಧಿಗೆ ನೀಡಿದ ಸಹಕಾರವನ್ನು ಸ್ಮರಿಸಿದ್ದಾರೆ.
ಬಿಳ್ಳೂರು ಸ್ತಂಭ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಆಗಾಗ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದರು. ಜತೆಗೆ ಆಲಯದ ಅಭಿವೃದ್ಧಿಗೆ ಸಹಕಾರವನ್ನೂ ನೀಡಿದ್ದರು. 2018ರಲ್ಲಿ ಆಲಯದಲ್ಲಿ ವೆಂಕಟೇಶ್ವರ ಸ್ವಾಮಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬಂದಿದ್ದ ಎಸ್‌ಪಿಬಿ, ಕಲ್ಯಾಣೋತ್ಸವ, ಹೋಮ ಹವನ ಸೇರಿ ಪೂಜಾ ಕಾರ್ಯಕ್ರಮ ನೆರವೇರಿಸಿದ್ದರು. 2007ರಲ್ಲಿ ಲಕ್ಷ್ಮೀನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿರುವುದು ವಿಶೇಷ. ಆಲಯ ಜೀರ್ಣೋದ್ಧಾರ, ಕಲ್ಯಾಣೋತ್ಸವ, ಉದ್ಘಾಟನಾ ಕಾರ್ಯಕ್ರಮದ ವೇಳೆ ಇಲ್ಲಿಗೆ ಭೇಟಿ ನೀಡಿದ್ದರು.
ಈ ಭಾಗದ ಪುರಾತನ ದೇವಾಲಯಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ ಆಸ್ಟ್ರೇಲಿಯಾದಲ್ಲಿ ಇಂಜಿನಿಯರ್ ಆಗಿರುವ, ಅನಿವಾಸಿ ಭಾರತೀಯ ಕೊಡೂರು ರಾಮಮೂರ್ತಿ ಸಹ ಬಾಲಸುಬ್ರಮಣ್ಯಂಗೆ ಆಪ್ತರು. ಇವರ ಸಲಹೆ ಮೇರೆಗೆ ಆಲಯದ ಅಭಿವೃದ್ಧಿಗೆ ನೆರವಾಗಿದ್ದರು.
1973ರಲ್ಲಿ ಚಿಕ್ಕಬಳ್ಳಾಪುರಕ್ಕೆ: ಹಳೇ ಗಣಪತಿ ದೇವಾಲಯದಲ್ಲಿ ಗಣೇಶ ಪ್ರತಿಷ್ಠಾಪನಾ ಸಮಿತಿಯು 1973ರಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇವರನ್ನು ನೋಡಲು ಸಾವಿರಾರು ಮಂದಿ ಜಮಾಯಿಸಿದ್ದರು. ಕಟ್ಟಡಗಳ ಮೇಲೆ ಕಾರ್ಯಕ್ರಮ ವೀಕ್ಷಿಸಿದ್ದರು ಎಂದು ಸ್ಮರಿಸುತ್ತಾರೆ ಸಾಹಿತಿ ಟಿ.ಎಸ್.ನಾಗೇಂದ್ರ ಬಾಬು.
ಬಾಲಸುಬ್ರಹ್ಮಣ್ಯಂ ಅಗಲಿಕೆಯು ಎಲ್ಲರನ್ನೂ ಶೋಕದಲ್ಲಿ ಮುಳುಗಿಸಿದೆ. ಇಲ್ಲಿನ ಆಲಯದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಿರುವುದರ ಜತೆಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸ್ಮರಣೀಯ. ಕೋಡೂರು ರಾಮಮೂರ್ತಿ, ಆಸ್ಟ್ರೇಲಿಯಾದಲ್ಲಿ ಇಂಜಿನಿಯರ್