ಬಿಸಿಯೂಟದಲ್ಲಿ ಹಲ್ಲಿ ಪತ್ತೆ, ವಿದ್ಯಾರ್ಥಿಗಳು ಅಸ್ವಸ್ಥ

IMG-20230708-WA0124
Published on

ಯಾದಗಿರಿ: ಹಲ್ಲಿ ಬಿದ್ದ ಬಿಸಿಯೂಟ (ಉಪ್ಪಿಟ್ಟು) ಸೇವಿಸಿದ ಅನೇಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಪಟ್ಟಣದ ಸಕರ್ಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶನಿವಾರ ಬೆಳಗ್ಗೆ ನಡೆದೆ.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಶನಿವಾರ ಬೆಳಗ್ಗೆ ವಿದ್ಯಾರ್ಥಿಗಳಿಗೆ ವಿತರಿಸಿದ ಉಪ್ಪಿಟ್ಟಿನಲ್ಲಿ ಹಲ್ಲಿ ಸತ್ತು ಬಿದ್ದಿತ್ತು ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಅಷ್ಟರಲ್ಲಿಯೇ ಅನೇಕರು ಆಹಾರ ಸೇವಿಸಿದ್ದಾರೆ. ಅದರಲ್ಲಿ 4 ರಿಂದ 5 ವಿದ್ಯಾರ್ಥಿಗಳಿಗೆ ವಾಂತಿಯಾಗಿ ಅಸ್ವಸ್ಥಗೊಂಡಿದ್ದಾರೆ. ಪಾಲಕರು ಗಾಬರಿಗೊಂಡು ಆಸ್ಪತ್ರೆಗೆ ದಾವಿಸಿದ್ದಾರೆ.
ವಿಷಯ ತಿಳಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಜಿಪಂ ಸಿಇಒ ಗರೀಮಾ ಪನ್ವಾರ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾಥರ್ಿಗಳ ಆರೋಗ್ಯ ವಿಚಾರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net