ಬಿಸಿಯೂಟದಲ್ಲಿ ಹುಳು; ವಿದ್ಯಾರ್ಥಿಗಳಿಂದ ಪ್ರತಿಭಟನೆ

06rajesh11
Published on

ಚಾಮರಾಜನಗರ: ಬಿಸಿಯೂಟದಲ್ಲಿ ಹುಳು ಕಾಣಿಸಿಕೊಂಡಿದೆ ಎಂದು ಆರೋಪಿಸಿ ಆಕ್ರೋಶಗೊಂಡ ವಿದ್ಯಾರ್ಥಿಗಳು ಶಾಲೆಯ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ಮಂಗಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಿಬ್ಬಂದಿಗಳು ತಯಾರಿಸಿದ ಬಿಸಿಯೂಟದಲ್ಲಿ ಮಧ್ಯಾಹ್ನ ಹುಳು ಕಾಣಿಸಿಕೊಂಡಿದೆ. ಕೆಲವು ವಿದ್ಯಾರ್ಥಿಗಳು ಊಟದಲ್ಲಿ ಹುಳು ಬಿದ್ದಿರುವುದನ್ನು ಕಂಡು ಹೌಹಾರಿದ್ದಾರೆ. ಈ ವೇಳೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಶಾಲೆಯ ಮುಂಭಾಗ ಕುಳಿತು ಅಡುಗೆ ಸಿಬ್ಬಂದಿಗಳು ಹಾಗೂ ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕೆಲವು ಸಮಯದ ಬಳಿಕ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಕೂಡ ಭಾಗಿಯಾದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಗ್ರಾಮಸ್ಥರ ನಡುವೆ ಕೆಲಕಾಲ ಮಾತುಕಥೆಯೂ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net