ಬಿಸಿಲಿನ ತಾಪ ಏಳು ಪ್ರಕರಣ ಪತ್ತೆ

Summer Season
climate change, low angle view Thermometer on blue sky with sun shining in summer show increase temperature, concept global warming
Published on

ಕಲಬುರಗಿ: ಜಿಲ್ಲೆಯಲ್ಲಿ ಕಳೆದೊಂದು ವಾರದಲ್ಲಿ ಬಿಸಿಲಿನ ತಾಪದಿಂದ ಸೌಮ್ಯ ಪ್ರಮಾಣದ ಏಳು ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರತಿಕಾಂತ ಸ್ವಾಮಿ ತಿಳಿಸಿದ್ದಾರೆ.

ಬಿಸಿಲಿನ ತಾಪಮಾನ ಹೆಚ್ಚಾಗಿದ್ದರೂ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸಿಲ್ಲ. ಬಿಸಿಲ ಶಾಖದಿಂದ ಈವರೆಗೆ ಸೌಮ್ಯ ಪ್ರಮಾಣದ ಏಳು ಪ್ರಕರಣ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರ ಮಟ್ಟದಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯ ಜನತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಮಾಧ್ಯಮದ ಮೂಲಕ ತಿಳಿಸಿದ್ದಾರೆ.

ಹವಾಮಾನ ಇಲಾಖೆ ಪ್ರಕಾರ ತಾಪಮಾನ ಇದೇ ರೀತಿ ಮುಂದುವರಿಯಲಿದ್ದು, ಸಾರ್ವಜನಿಕರು, ಮಕ್ಕಳು, ಗರ್ಭಿಣಿಯರು ಹೆಚ್ಚಿನ ರೀತಿಯಲ್ಲಿ ಆರೋಗ್ಯದ ಕಾಳಜಿ ವಹಿಸಬೇಕು. ಆರೋಗ್ಯದಲ್ಲಿ ಯಾವುದೇ ತೆರನಾದ ಬದಲಾವಣೆ ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net