

ಬಾಗಲಕೋಟೆ: ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿರುವದರಿಂದ ಉಷ್ಣಾಂಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ಸಮಸ್ಯೆಗಳು ಉಂಟಾಗುತ್ತಿದೆ. ಇವುಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿವೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಪರಿಸರ ಕೋಶದಿಂದ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಮನುಷ್ಯನ ದೇಹದ ಉಷ್ಣಾಂಶಕ್ಕಿAತ ಹೆಚ್ಚಿನ ಉಷ್ಣಾಂಶದ ಒತ್ತಡದಿಂದ ತೀವ್ರ ಜ್ವರ, ಊತ, ಸ್ನಾಯುಗಳ ಸೆಳೆತ, ಪ್ರಜ್ಞೆ ತಪ್ಪುವುದು ಸೇರಿದಂತೆ ಇತರೆ ಸಮಸ್ಯೆಗಳು ಆರೋಗ್ಯದ ಉಂಟಾಗುತ್ತವೆ. ಇದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಕೈಗೊಳ್ಳುವುದು ಅಗತ್ಯವಾಗಿದೆ ಎಂದರು.
ಹೀಟ್ ಸ್ಟೊçÃಕ್‌ನಿಂದ ಬಳಲುತ್ತಿರುವವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ೫ ಬೆಡ್ ಹಾಗೂ ಆಯಾ ತಾಲೂಕಾ ಆಸ್ಪತ್ರೆಗಳಲ್ಲಿ ತಲಾ ೨ ಬೆಡ್‌ಗಳನ್ನು ಪ್ರತ್ಯೇಕ ಸಜ್ಜುಗೊಳಿಸಲಾಗಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ವೆಂಟಿಲೇಟರಗಳು ಚೆನ್ನಾಗಿ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಬೇಕು. ಅಗತ್ಯ ಔಷಧೋಪಚಾರ ಕೊರತೆ ಆಗದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿಗಳು ಮುತುವರ್ಜಿ ವಹಿಸಲು ಸೂಚಿಸಿದರು. ಹೀಟ್ ಸ್ಟೊçÃಕ್ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಸಹ ಮುಖ್ಯವಾಗಿದೆ. ಜಿಲ್ಲಾ ಮಟ್ಟದಲ್ಲಿ ಹಾಗೂ ಇಲಾಖಾ ಹಂತದಲ್ಲಿ ಕಂಟ್ರೋಲ್ ರೂಮ್ ತೆರೆಯುವಂತೆ ಜಿಲ್ಲಾಽಕಾರಿ ಸೂಚಿಸಿದರು.
ಬಿಸಿ ಗಾಳಿಯ ಒತ್ತಡ ಹಾಗೂ ಬಿಸಿ ಗಾಳಿಗೆ ಸಂಬAಧಪಟ್ಟ ಆರೋಗ್ಯ ಸಮಸ್ಯೆಗಳಿಂದ ಎಲ್ಲರಿಗೂ ಅಪಾಯವಿದ್ದು, ಚಿಕ್ಕ ಮಕ್ಕಳು, ಗರ್ಭಿಣಿಯರು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವು, ವಿಶೇಷವಾಗಿ ಹೃದಯರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಹೆಚ್ಚಾಗಿ ನೀರು ಕುಡಿಯಬೇಕು. ಉತ್ತಮ ಗಾಳಿ ತಣ್ಣಗಿರುವ ಪ್ರದೇಶದಲ್ಲಿ ಇರಬೇಕು. ಮಧ್ಯಾಹ್ನ ೧೨ ರಿಂದ ೩ ಗಂಟೆವರೆಗೆ ಹೊರಗೆ ಹೋಗುವುದನ್ನು ತಪ್ಪಿಸಬೇಕು.
ಜಿಲ್ಲೆಯಲ್ಲಿ ಪ್ರಸಕ್ತ ೨೦೨೪-೨೫ನೇ ಸಾಲಿನಲ್ಲಿ ಹಾವು ಕಡಿತಕ್ಕೆ ಸಂಬAಽಸಿದAತೆ ೩೭೧ ಪ್ರಕರಣಗಳು ದಾಖಲಾಗಿದ್ದು, ಕಳೆದ ೪ ತಿಂಗಳಲ್ಲಿ ಹಾವು ಕಡಿತದಿಂದ ೪ ಜನ ಸಾವನ್ನಪ್ಪಿದ್ದಾರೆ. ಅವರ ಕುಟುಂಬಕ್ಕೆ ಪರಿಹಾರ ಒದಗಿಸಲು ಅರಣ್ಯ ಹಾಗೂ ಕೃಷಿ ಇಲಾಖೆ ತುರ್ತು ಕ್ರಮವಹಿಸಲು ಸೂಚಿಸಿದರು. ಹಾವು ಕಡಿದಾಗ ನಾಟಿವೈದ್ಯರ ಕಡೆ ಹೋಗದೇ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ಎ.ಎಸ್.ವಿ ಇಂಜಕ್ಷನ್ ಪಡೆದುಕೊಂಡರೆ ಸಾವಿನಿಂದ ಪಾರಾಗಬಹುದು. ಈ ಇಂಜಕ್ಷನ್ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ಹಾವು ಕಡಿದಾಗ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಾರ್ವಜನಿಕರಲ್ಲಿ ಜಿಲ್ಲಾಽಕಾರಿಗಳು ಮನವಿ ಮಾಡಿಕೊಂಡರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಜಿಲ್ಲಾ ಅರಣ್ಯ ಸಂರಕ್ಷಣಾಽಕಾರಿ ಋಥ್ರೇನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಮಂಜುನಾಥ ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷ÷್ಮಣ ಕಳ್ಳೇನ್ನವರ, ಜಿಲ್ಲಾ ಕುಟುಂಬ ಕಲ್ಯಾಣಾಽಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಡಾ.ಕುಸುಮಾ ಮಾಗಿ, ಭೂದಾಖಲೆ ಇಲಾಖೆಯ ಉಪನಿರ್ದೇಶಕ ರವಿಕುಮಾರ ಎಂ. ಸೇರಿದಂತೆ ಇತರರು ಉಪಸ್ಥಿತರಿದ್ದರು.