ಬೀಜ, ಗೊಬ್ಬರ ವಿತರಣೆಗೆ ವ್ಯವಸ್ಥೆ

5ang1
Published on

ಅಣ್ಣಿಗೇರಿ: ಜಿಲ್ಲಾದ್ಯಂತ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿದ್ದರಿಂದ ರೈತರಿಗೆ ಸಕಾಲಕ್ಕೆ ಪೂರೈಸಲು ಬೀಜ, ಗೊಬ್ಬರ ಮತ್ತಿತರ ಕೃಷಿ ಸಾಮಗ್ರಿಯನ್ನು ಜಿಲ್ಲಾಡಳಿತ ದಾಸ್ತಾನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿದ ಅವರು, ಇಲ್ಲಿ ಈಗಾಗಲೇ ಸಾಕಷ್ಟು ಹೆಸರು, ಕಡಲೆ, ಶೇಂಗಾ ಬೀಜಗಳು ದಾಸ್ತಾನಿವೆ. ರೈತರು ಇವುಗಳನ್ನು ಪಡೆದುಕೊಂಡು ಬಿತ್ತನೆ ಮಾಡಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆ ಬೀಜಗಳ ಬೇಡಿಕೆ ಹೆಚ್ಚಾಗಿರುವುದರಿಂದ ಹಂತ ಹಂತವಾಗಿ ಜಿಲ್ಲಾಡಳಿತದಿಂದ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ರವಾನಿಸಲಾಗುವುದು ಎಂದು ಹೇಳಿದರು.

ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಬಿ.ಸಿ. ಸತೀಶ, ತಹಸೀಲ್ದಾರ್ ಕೊಟ್ರೇಶ್ವರ ಗಾಳಿ, ತಾಪಂ ಇಒ ಪವಿತ್ರಾ ಪಾಟೀಲ, ನವಲಗುಂದ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಎಂ.ಆರ್. ದಂಡಗಿ, ಡಾ. ಮೈತ್ರಿ, ಷಣ್ಮುಖ ಗುರಿಕಾರ, ಶಿವಶಂಕರ ಕಲ್ಲೂರ, ಯಲ್ಲಪ್ಪ ಮರಬಸಿ, ಲೋಕನಾಥ ಹೆಬಸೂರ, ಭಗವಂತಪ್ಪ ಪುಟ್ಟಣ್ಣವರ, ಎ.ಪಿ. ಗುರಿಕಾರ, ಇತರರಿದ್ದರು.

ರೈತರಿಗೆ ಪರಿಹಾರ ಹಣ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವ ಯೂನಿಯನ್ ಬ್ಯಾಂಕ್, ಕೆನರಾ ಬ್ಯಾಂಕ್ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಮಾಡಲಾಗುವುದು. 2019ನೇ ಸಾಲಿನಲ್ಲಿ ಬಾಕಿ ಉಳಿದ ಅತಿವೃಷ್ಟಿ, ಅನಾವೃಷ್ಟಿ ಪರಿಹಾರದ ಹಣವನ್ನು ಆದಷ್ಟು ಬೇಗ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. | ದೀಪಾ ಚೋಳನ್ ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net