ಬೀಜ, ಗೊಬ್ಬರದ ಕೊರತೆ ಆಗದಿರಲಿ

0406Aland1.
Published on

ಆಳಂದ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಶಾಸಕ ಸುಭಾಷ ಗುತ್ತೇದಾರ್ ಸೂಚನೆ ನೀಡಿದರು.
ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆಯಿಂದ ಗುರುವಾರ ರೈತರಿಗೆ ಬಿತ್ತನೆ ಬೀಜ ವಿತರಿಸಿದ ಅವರು, ಮುಂಗಾರು ಪ್ರಾರಂಭವಾಗಿದ್ದು, ತಾಲೂಕಿನಲ್ಲಿ ಸ್ವಲ್ಪ ಮಳೆಯಾಗಿದೆ. ರೈತಾಪಿ ವರ್ಗ ಬಿತ್ತನೆಗೆ ಸಿದ್ಧರಾಗಿದ್ದಾರೆ. ಹೀಗಾಗಿ ನರೋಣಾ, ಮಾದನ ಹಿಪ್ಪರಗಾ, ನಿಂಬರ್ಗಾ , ಖಜೂರಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಿ. ಅಲ್ಲದೆ ಕರೊನಾ ತಡೆಗಟ್ಟುವುದಕ್ಕಾಗಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.
ಕೃಷಿ ಸಹಾಯಕ ನಿರ್ದೇಶಕ ಶರಣಗೌಡ ಪಾಟೀಲ್ ಮಾತನಾಡಿ, 1,31,131 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತುವ ಗುರಿ ಹೊಂದಿದ್ದು, 4800 ಕ್ವಿಂಟಾಲ್ ಬೀಜದ ಸಂಗ್ರಹವಿದ್ದು, 6000 ಕ್ವಿಂಟಾಲ್ ಬೀಜ ಬರಬೇಕಾಗಿದೆ. ಈಗಾಗಲೇ ಸೋಯಾಬೀನ್, ತೊಗರಿ, ಉದ್ದು, ಹೆಸರು, ಸೂರ್ಯಕಾಂತಿ, ಸಜ್ಜೆ, ಮೆಕ್ಕೆ ಜೋಳ ಸೇರಿ 7 ತರಹದ ಬೀಜಗಳು ಲಭ್ಯವಿದೆ. ರೈತರು ಬಿತ್ತನೆ ಬೀಜ ಪಡೆಯಲು ಬರುವಾಗ ಆಧಾರ್ ಕಾಡರ್್, ಪಹಣಿ, ಬ್ಯಾಂಕ್ ಪಾಸ್ಬುಕ್ ಝೆರಾಕ್ಸ್ ಪ್ರತಿ ತರಬೇಕು ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ಸುವರ್ಣ ಮಲಾಜಿ, ತಾಪಂ ಉಪಾಧ್ಯಕ್ಷ ಗುರುನಾಥ ಪಾಟೀಲ್, ತಹಸೀಲ್ದಾರ್ ದಯಾನಂದ ಪಾಟೀಲ್, ಇಒ ಡಾ. ಸಂಜಯ ರೆಡ್ಡಿ, ಪ್ರಮುಖರಾದ ಮಲ್ಲಣ್ಣ ನಾಗೂರೆ, ಹಣಮಂತರಾವ ಮಲಾಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net