

ಬೀದರ್: ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ ಅವರನ್ನು ಕಾಂಗ್ರೆಸ್‍ನ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೂಡಲೇ ತಮ್ಮ ಜವಾಬ್ದಾರಿ ವಹಿಸಿಕೊಂಡು, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.