ಬೀದಿ ನಾಟಕ ಮೂಲಕ ಮತದಾನ ಜಾಗೃತಿ

IMG-20230415-WA0095
Published on

ಚನ್ನರಾಯಪಟ್ಟಣ: ರಾಜ್ಯ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಶನಿವಾರ ಬೀದಿನಾಟಕ ಪ್ರದರ್ಶನ ಮತ್ತು ಜಾನಪದ ಗೀತೆಗಳ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

ಮತದಾನದ ಮಹತ್ವ, ಯಾವುದೇ ಆಮಿಷಗಳಿಗೆ ಬಲಿಯಾಗದೇ ಮತದಾನ ಮಾಡುವ ಬಗ್ಗೆ, ಮತದಾನ ಮಾಡುವ ಮುನ್ನ ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು, ಅಮಿಷಗಳನ್ನು ಕಂಡಲ್ಲಿ ಮತದಾರರು ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net