ಬೀದಿಬದಿ ವ್ಯಾಪಾರಕ್ಕೆ ಗುರುತಿನ ಚೀಟಿ ಕಡ್ಡಾಯ

Bhuvanesh Patil
Published on

ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಬೀದಿ ಬದಿ ವ್ಯಾಪಾರಿಗಳು ಪಾಲಿಕೆಯಿಂದ ಗುರುತಿನ ಚೀಟಿ ಹಾಗೂ ಮಾರಾಟ ಪ್ರಮಾಣಪತ್ರ ಪಡೆದು ವ್ಯಾಪಾರ ಮಾಡಬೇಕು ಎಂದು ಪಾಲಿಕೆ ಆಯುಕ್ತ ಭುವನೇಶ ಪಾಟೀಲ್ ತಿಳಿಸಿದ್ದಾರೆ. ಅನಧಿಕೃತವಾಗಿ ವ್ಯಾಪಾರ- ವಹಿವಾಟು ನಡೆಸಿದ್ದಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ. ಹೀಗಾಗಿ ಎಲ್ಲ ಬೀದಿ ವ್ಯಾಪಾರಿಗಳು ಅಗತ್ಯ ದಾಖಲೆಗಳನ್ನು ಪಾಲಿಕೆಯ ಕೋಣೆ ಸಂಖ್ಯೆ ೪೭ರಲ್ಲಿ ಸಲ್ಲಿಸಿ, ಗುರುತಿನ ಕಾರ್ಡ್ ಮತ್ತು ಮಾರಾಟ ಪ್ರಮಾಣ ಪತ್ರ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net