ಈ ವೇಳೆ ಅಡುಗೆ ಕೊಠಡಿಯನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ತಯಾರು ಮಾಡಿದ್ದ ಅಡುಗೆಯನ್ನು ಪರಿಶೀಲಿಸಿದರು. ಏನು ಸಾಂಬರ್ ಮಾಡಿದ್ದೀರಾ? ಅಡುಗೆ ಮಾಡುವುದಕ್ಕೆ ಪಾತ್ರೆಗಳೆಲ್ಲಾ ಸಮರ್ಪಕವಾಗಿ ಇದಾವಾ ಎಂಬೆಲ್ಲಾ ಪ್ರಶ್ನೆ ಮಾಡಿ ಮಾಹಿತಿ ಪಡೆದುಕೊಂಡರು. ಮಕ್ಕಳ ಕಲಿಕೆಗೆ ಪೂರಕವಾದ ಸುಸಜ್ಜಿತ ಗ್ರಂಥಾಲಯದ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ್ ಭವನ, ಮರುಳೂರುದಿಣ್ಣೆ ಸ್ಲಂ ಪ್ರದೇಶ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಮರಳೂರು ದಿಣ್ಣೆಯ ಸ್ಲಂ ಪ್ರದೇಶದಲ್ಲಿ ಕೆಲವೊಂದು ಸಮಸ್ಯೆಗಳಿದ್ದವು. ಅವುಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಈ ವೇಳೆ ಪ್ರಧಾನಮಂತ್ರಿಗಳ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಅಲೀಉಲಾ ಇದ್ದರು.