

ಚಿತ್ರದುರ್ಗ: ರಾಜಬೀದಿ ದೊಡ್ಡಪೇಟೆ ಕಂಬಳಿ ಬೀದಿಯಲ್ಲಿರುವ ಬೀರಗಲ್ಲೇಶ್ವರ ಸ್ವಾಮಿ ದೇಗುಲದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮದ ಅಂಗವಾಗಿ ಆ. 25ರಂದು ಮಧ್ಯಾಹ್ನ 1.30ಕ್ಕೆ ಸ್ವಾಮಿಗೆ ಮಹಾರುದ್ರಾಭಿಷೇಕ ಸೇವೆ ಹಮ್ಮಿಕೊಳ್ಳಲಾಗಿದೆ.
24ರಂದು ಸೊಲ್ಲಾಪುರ ಗ್ರಾಮದ ಚಂದ್ರಣ್ಣ ಮತ್ತು ತಂಡದಿಂದ ಶನಿದೇವರ ಪುರಾಣ ಪ್ರವಚನ ಏರ್ಪಡಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಬೀರಗಲ್ಲೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಮನವಿ ಮಾಡಿದೆ.