ಬೀರಗಲ್ಲೇಶ್ವರ ಸ್ವಾಮಿ ರುದ್ರಾಭಿಷೇಕ ಸೆ. 3ಕ್ಕೆ

Beeragaleshwara Swamy
Published on

ಚಿತ್ರದುರ್ಗ: ರಾಜಬೀದಿ ದೊಡ್ಡಪೇಟೆ ಕಂಬಳಿ ಬೀದಿಯಲ್ಲಿರುವ ಬೀರಗಲ್ಲೇಶ್ವರ ಸ್ವಾಮಿ ದೇಗುಲದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮದ ಅಂಗವಾಗಿ ಸೆ. 3ರಂದು ಮಧ್ಯಾಹ್ನ 1.30ಕ್ಕೆ ಸ್ವಾಮಿಗೆ ಮಹಾರುದ್ರಾಭಿಷೇಕ ಸೇವೆ ಹಮ್ಮಿಕೊಳ್ಳಲಾಗಿದೆ.

ಸೆ. 2ರಂದು ಸೊಲ್ಲಾಪುರ ಗ್ರಾಮದ ಚಂದ್ರಣ್ಣ ಮತ್ತು ತಂಡದಿಂದ ಶನಿದೇವರ ಪುರಾಣ ಪ್ರವಚನ ಏರ್ಪಡಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಬೀರಗಲ್ಲೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಮನವಿ ಮಾಡಿದೆ.

ಶ್ರಾವಣ ಮಾಸದ ಮೂರನೇ ಶುಕ್ರವಾರ ದುರ್ಗದ ಅಧಿದೇವತೆ ಏಕನಾಥೇಶ್ವರಿ, ನಗರದೇವತೆಗಳಾದ ಹೊಳಲ್ಕೆರೆ ರಸ್ತೆಯ ಬರಗೇರಮ್ಮ, ಗೌರಸಂದ್ರ ಮಾರಮ್ಮ, ಕೋಟೆ ರಸ್ತೆಯ ಉಚ್ಚಂಗಿಯಲ್ಲಮ್ಮ, ಕುಂಚಿಗನಾಳ್ ಕಣಿವೆಮಾರಮ್ಮ, ನಗರ ಪೊಲೀಸ್ ಠಾಣೆ ಆವರಣದ ಕಣಿವೆಮಾರಮ್ಮ, ತ್ರಿಪುರಸುಂದರಿ ತಿಪ್ಪಿನಘಟ್ಟಮ್ಮ, ಅಂತರಘಟ್ಟಮ್ಮ, ಕೆಳಗೋಟೆಯ ಕೊಲ್ಲಾಪುರದ ಮಹಾಲಕ್ಷ್ಮೀ, ಮೆದೇಹಳ್ಳಿ ರಸ್ತೆಯ ಉಮಾಮಹೇಶ್ವರಿ ದೇವಿ ಸೇರಿ ಶಕ್ತಿದೇವತೆಗಳಿಗೆ ವಿಶೇಷ ಅಲಂಕಾರ ಸೇವೆಯೊಂದಿಗೆ ಪೂಜೆಗಳು ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net