ಬುದ್ದ, ಬಸವ, ಅಂಬೇಡ್ಕರ ಜಾತಿಗೆ ಸೀಮಿತರಲ್ಲ

bkt-29-3
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಬಸವ ಮಂಟಪದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಹಾಗೂ ಕೂಡಲಸಂಗಮ ಅಭಿವೃದ್ಧಿ ಪ್ರಾಽಕಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅನುಭವ ಮಂಟಪ-ಬಸವಾದಿ ಶರಣರ ವೈಭವ -೨೦೨೫ ಕಾರ್ಯಕ್ರಮ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಿದರು.
Published on

ಬಾಗಲಕೋಟೆ: ಬುದ್ದ, ಬಸವ, ಅಂಬೇಡ್ಕರ ಯಾವುದೇ ಜಾತಿಗೆ ಸೀಮಿತರಾಗಿಲ್ಲ. ಈ ಜಾತಿ ಜಗತ್ತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅಣ್ಣ ಬಸವಣ್ಣ ಕನ್ನಡ ಸಾರಸ್ವತ ಲೋಕದ ಬೆಳಕು ಇದ್ದಂತೆ. ಪ್ರತಿ ವರ್ಷವು ಕೂಡಲಸಂಗಮದಲ್ಲಿ ಸಾಂಸ್ಕೃತಿಕ ವೈಭವ ಮೇಳೈಸುವಂತಾಗಬೇಕು ಎನ್ನುವುದು ನಮ್ಮೆಲ್ಲರ ಆಶಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಕೂಡಲಸಂಗಮದ ಬಸವ ಮಂಟಪದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಹಾಗೂ ಕೂಡಲಸಂಗಮ ಅಭಿವೃದ್ಧಿ ಪ್ರಾಽಕಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅನುಭವ ಮಂಟಪ-ಬಸವಾದಿ ಶರಣರ ವೈಭವ -೨೦೨೫ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು ತಮ್ಮ ವಚನದ ಮೂಲಕ ಆಡಳಿತ ವ್ಯವಸ್ಥೆ ಕಲಿಸಿಕೊಟ್ಟಿದ್ದಾರೆ. ಅವರ ಹುಟ್ಟುಹಾಕಿದ ಅನುಭವ ಮಂಟಪ ಇಂದು ಸಂಸತ್ತಾಗಿ ಪರಿವರ್ತನೆಗೊಂಡಿದೆ ಎಂದರು.

ಜಯ0ತಿಗಳನ್ನು ಆಚರಣೆ ಮಾಡುವ ಉದ್ದೇಶ ಮಹಾಪುರುಷರ ಇತಿಹಾಸವನ್ನು ಯುವಕರಿಗೆ ಪರಿಚಯಿಸುವ ಕೆಲಸ ಮಾಡಬೇಕಿದೆ. ಬಸವಣ್ಣನವರ ವಚನಗಳನ್ನು ಈಡಿ ರಾಜ್ಯಕ್ಕೆ ಪರಿಚಯಿಸುವ ಕಾರ್ಯ ಮಾಡಬೇಕು. ಅವರ ಆಚಾರ, ವಿಚಾರ, ವಚನಗಳ ಮೂಲಕ ಇತಿಹಾಸ ಸೃಷ್ಟಿಸಿ ಸಾಮಾಜಿಕ ನ್ಯಾಯ ಕೊಡುವ ಕೆಲಸ ಸÀರ್ಕಾರ ಮಾಡುತ್ತಿದೆ. ಬಸವಣ್ಣನವರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದರ ಅವರ ಆಚಾರ, ವಿಚಾರಗಳನ್ನು ದಿನ ನಿತ್ಯ ಚಿಂತನೆ ಮಾಡಿ ಜೀವನ ನಡೆಸುತ್ತಿರುವವರು ಸಂಖ್ಯೆ ಬಹರಳ ವಿರಳವಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, ೧೨ನೇ ಶತಮಾನದಲ್ಲಿ ಅಸ್ಪÈಶ್ಯತೆ ತೊಡೆದು ಹಾಕುವದರ ಜೊತೆಗೆ ಎಲ್ಲರನ್ನು ಎಲ್ಲ ಜನಾಂಗಗಳನ್ನು ಒಂದುಗೂಡಿಸುವ ಕಾರ್ಯ ಮಾಡಿದರು. ಕಾಯಕ ತತ್ವದ ಮೇಲೆ ಹೊಸ ಪರಿವರ್ತನೆ ಮಾಡಿದರು. ಇವತ್ತಿನವರೆಗೂ ಬಗೆಹರಿಯದೇ ಜಾತಿ, ಧರ್ಮ, ಘರ್ಷಣೆಗಳು ನಡೆಯುತ್ತಲಿವೆ. ಮಾನವನನ್ನು ಮಾನವನನ್ನಾಗಿ ಕಾಣದ ಧರ್ಮ ಯಾವುದು. ಬಸವಣ್ಣನವರು ಹಾಕಿ ಕೊಟ್ಟ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು ಎಂಬ ಉದ್ದೇಶದಿಂದ ಅವರ ತತ್ವಾದರ್ಶಗಳನ್ನು ಪರಿಚಯಿಸುವ ಕಾರ್ಯ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ ಎಂದರು.

ಆಚರಣೆ ಸಮಿತಿ ಸದಸ್ಯರಾದ ನಿಷ್ಕಲ ಮಂಟಪದ ನಿಜಗುಣಾನಂದ ಮೈಸೂರು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ, ಇಳಕಲ್ಲಿನ ಗುರುಮಹಾಂತ ಸ್ವಾಮೀಜಿ, ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಸಿದ್ದನಕೊಳ್ಳದ ಧರ್ಮಾಽಕಾರಿ ಡಾ.ಶಿವಕುಮಾರ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನಿ ಸ್ವಾಮೀಜಿ, ಸಾಹಿತಿಗಳಾದ ರಂಜಾನ ದರ್ಗಾ, ಡಾ.ಮೀನಾಕ್ಷಿ ಬಾಳಿ, ಡಾ.ಪುರುಶೋತ್ತಮ, ಪ್ರೊ.ಎಸ್.ಕೆ.ಸಿದ್ದರಾಮಯ್ಯ, ಜಿಲ್ಲಾಽಕಾರಿ ಜಾನಕಿ ಕೆ.ಎಂ., ಜಿ.ಪಂ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯತ್ರಿ, ಕೂಡಲಸಂಗಮದ ಅಭಿವೃದ್ಧಿ ಪ್ರಾಽಕಾರದ ಆಯುಕ್ತ ಮಹಾದೇವ ಮುರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net