ಬುದ್ಧ ಜಯಂತಿ ಅರ್ಥಪೂರ್ಣ ಆಚರಿಸಿ

08 ydg 03
Published on

ಯಾದಗಿರಿ: ಜಿ¯್ಲÁಡಳಿತದಿಂದ ಮೇ ೧೨ರಂದು ಭಗವಾನ ಬುದ್ಧ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿ¯್ಲÁಧಿಕಾರಿ ಡಾ.ಸುಶೀಲಾ ತಿಳಿಸಿದರು.

ಗುರುವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಯಂತಿ ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ನಗರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಅಂದು ಬೆಳಗ್ಗೆ ೧೧ಕ್ಕೆ ಕಾರ್ಯಕ್ರಮ ನಡೆಯಲಿದೆ. ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ, ವೇದಿಕೆ ಸಿದ್ಧತೆ ಮಾಡಿಕೊಳ್ಳುವಂತೆ ಹಾಗೂ ನುರಿತ ಉಪನ್ಯಾಸಕರನ್ನು ಆಹ್ವಾನಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮೆರವಣಿಗೆ ಕುರಿತು ಮುಂಚಿತವಾಗಿ ಮಾಹಿತಿ ನೀಡಬೇಕು. ಜಿ¯್ಲÁ ,ಗ್ರಾಪಂ, ತಾಲೂಕು ಮಟ್ಟ ಹಾಗೂ ಶಾಲಾ, ಕಾಲೇಜು, ಕಚೇರಿಯಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲು ಹಾಗೂ ಈ ಬಾರಿ ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆಯಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಜಯಂತಿಯAದು ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಬೇಕು ಎಂದು ಸೂಚಿಸಿದರು.

ಈ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಓರ್ಡಿಯಾ, ಅಪರ್ ಜಿ¯್ಲÁಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ರಾಹುಲï ಹುಲೆಮನಿ, ಮಲ್ಲಪ್ಪ ಹುಸೇನಪ್ಪ,ನೀಲಕಂಠ ಬಡಿಗೇರ್,ಬಂತೆ ಮೆತ್ತಪಾಲï, ನಾಗಣ್ಣ ಕಲ್ಲದೇವನಹಳ್ಳಿ,ರಾಮಲಿಂಗಪ್ಪ, ಮಹಾದೇವಪ್ಪ ಬಿಜಾಸ್ಪುರ್, ಗಿರೀಶ್ ಚಟ್ಟಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net