ಬುದ್ಧ, ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ತತ್ವಗಳ ಪಾಲನೆ ಮುಖ್ಯ: ಕೆಎಸ್ ಮಂಜೇಗೌಡ

ಬುದ್ಧ, ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ತತ್ವಗಳ ಪಾಲನೆ ಮುಖ್ಯ: ಕೆಎಸ್ ಮಂಜೇಗೌಡ
Published on

ಆಲೂರು : ಬುದ್ಧ, ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವ ಜನಾಂಗದವರು ಒಪ್ಪಿಕೊಳ್ಳುವ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜಿಲ್ಲಾ ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಕೆಎಸ್ ಮಂಜೇಗೌಡ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2021 22 ನೇ ಸಾಲಿನ ಸಾಂಸ್ಕೃತಿಕ ಕ್ರೀಡೆ ಎನ್.ಎಸ್.ಎಸ್ ಸೈಟ್ಸ್ ಮತ್ತು ಗೈಡ್ಸ್ ಆಗೋ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಭಗವಾನ್ ಬುದ್ಧನು ಆಸೆಯೇ ದುಖಃಕ್ಕೆ ಮೂಲ ಎಂದು ಸಾರಿದರೇ, ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹಾಗೂ ಡಾ. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಮತ್ತು ಒಗ್ಗಟ್ಟಿನ ಹೋರಾಟ ಎಂಬ ಸಂದೇಶವನ್ನು ಸಮಾಜಕ್ಕೆ ಸಾರಿದ್ದಾರೆ. ಜೀವನದ ಸಾರವನ್ನು ತಿಳಿಸುವ ಈ ಸಂದೇಶಗಳು ಮಾದರಿಯಾಗಿವೆ ಎಂದರು.ದೇಶಕ್ಕೆ ಸಂವಿಧಾನವನ್ನು ನೀಡಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾನತೆಯ ಹರಿಕಾರರಾಗಿದ್ದಾರೆ. ದಾರ್ಶನಿಕರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರನ್ನು ಸನ್ಮಾನಿಸುತ್ತಿರುವುದು ಸಂತಸ ಸಂಗತಿ.

ಕನ್ನಡ ಉಪನ್ಯಾಸಕ ಪ್ರೊ ಡಿ.ಕೆ ಮಂಜಯ್ಯ ಮಾತನಾಡಿ, ವಿದ್ಯಾರ್ಥಿಗಳು ಒತ್ತಡ ಮುಕ್ತರಾಗಲು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕ. ವಿದ್ಯಾರ್ಥಿಗಳು ಸದಾ ಕ್ರಿಯಶೀಲರಾಗಿರಬೇಕು. ಸಾಂಸ್ಕೃತಿಕ ಮತ್ತು ಕ್ರೀಡಾಭ್ಯಾಸಗಳು ನಿಮ್ಮನ್ನು ಸದಾ ಚಟುವಟಿಕೆಯಿಂದ ಇರುವಂತೆ ಮಾಡುವ ಶಕ್ತಿ ಹೊಂದಿದೆ. ಸಾಂಸ್ಕೃತಿಕವಾಗಿ ಯಾವ ದೇಶ ಮುಂದುವರಿದಿರುವುದಿಲ್ಲವೋ ಆ ದೇಶ ಶೈಕ್ಷ ಣಿಕವಾಗಿಯು ಮುಂದುವರಿಯಲು ಸಾಧ್ಯವಿಲ್ಲ. ಸಂಸ್ಕೃತಿಯಿಲ್ಲದ ಶಿಕ್ಷ ಣ, ದೇಶ, ಹಿನ್ನಡೆ, ಅನುಭವಿಸುವುದರಲ್ಲಿ ಸಂದೇಹವಿಲ್ಲ. ಸಂಸ್ಕೃತಿ, ಸಂಪ್ರದಾಯ ಆಚಾರ ವಿಚಾರ ಅತಿಥಿ ಸತ್ಕಾರಕ್ಕೆ ನಮ್ಮ ಭಾರತ ದೇಶ ಹೆಸರುವಾಸಿ ಪಡೆದಿದೆ. ಈ ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಇರುವ ಭಯವನ್ನು ಹೋಗಲಾಡಿಸಲು ಪ್ರಮುಖ ಅಸ್ತ್ರ ಎಂದು ತಿಳಿಸಿ

ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವೇದಾಸುರೇಶ್, ಹೊಳೆನರಸೀಪುರ ಮಹಿಳಾ ಸರ್ಕಾರಿ ವಿಜ್ಞಾನ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಭಾರತೀದೇವಿ. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ವಿಜಯಕಾಂತ್. ಬಾಲಕೃಷ್ಣ, ಆಶಾಮಲ್ಲಿ ಕಾರ್ಜುನ್, ಕಾಲೇಜು ಪ್ರಾಂಶು ಪಾಲ ಕೃಷ್ಣಗೌಡ, ಉಪನ್ಯಾಸ ಕರುಗಳಾದ ಮೋಹನ್, ಡಿಕೆ ಮಂಜಯ್ಯ, ಶಿವಪ್ರಸಾದ್ ಮೋಹನ್ ಕುಮಾರ್, ಪುರುಷೋತ್ತಮ್, ಕಚೇರಿ ಅಧೀಕ್ಷಕ ರವಿಪ್ರಕಾಶ್ ಸೇರಿದಂತೆ ಅತಿಥಿ ಉಪನ್ಯಾಸಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net