ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ

04 july tnp 02
Published on

ತಿ.ನರಸೀಪುರ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಮೊದಲ ಕಾರ್ಯಕಾರಿಣಿ ಸಭೆ ಜರುಗಿತು.

ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮುಂಬರುವ ಸ್ಥಳೀಯ ಚುನಾವಣೆಗಳಿಗೆ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವುದು, ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವುದು, ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ಚಾಮರಾಜನಗರ ಸಂಸದ ಸುನೀಲ್ ಬೋಸ್ ಅವರ ಕೈ ಬಲಪಡಿಸುವುದು ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲಾಯಿತು.

ಯುವ ಕಾಂಗ್ರೆಸ್ ಮೈಸೂರು ಜಿಲ್ಲಾಧ್ಯಕ್ಷ ಚಂದನ್ ಗೌಡ ಮಾತನಾಡಿ, ಕ್ಷೇತ್ರವಾರು ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಬಗ್ಗೆ ಗಂಭೀರ ಚಿಂತನೆಗಳಾಗಬೇಕು. ಯುವಕರನ್ನು ಪಕ್ಷದ ಸಂಘಟನೆಯ ಮುಖ್ಯ ವಾಹಿನಿಗೆ ಕರೆತರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು.

ವಿಧಾನಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷ ನವಾಜ್ ಖಾನ್, ತಿ.ನರಸೀಪುರ ಬ್ಲಾಕ್ ಅಧ್ಯಕ್ಷ ಎಸ್.ಪ್ರದೀಪ, ಬನ್ನೂರು ಬ್ಲಾಕ್ ಅಧ್ಯಕ್ಷ ಮಹಮ್ಮದ್ ವಾಸಿಮ್, ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಶಿವಶಂಕರ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಪೂಜಶ್ರೀ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಶಶಾಂಕ್, ಫಯಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net