ಬೂದು ನೀರು ನಿರ್ವಹಣೆ ಕಾಮಗಾರಿ ತ್ವರಿತಕ್ಕೆ ತಾಕೀತು

ctd Rdpr mahesh --
Published on

ಚಿತ್ರದುರ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಎಸ್.ಸಿ. ಮಹೇಶ್ ಈಚೆಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಘನತ್ಯಾಜ್ಯ ನಿರ್ವಹಣೆ, ಬೂದು ನೀರು ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಮೊಳಕಾಲ್ಮೂರು ತಾಲೂಕಿನ ಕೆರೆಕೊಂಡಾಪುರದ ಸ್ವಚ್ಛ ಸಂಕೀರ್ಣ ಘಟಕದಲ್ಲಿ ಘನ ತ್ಯಾಜ್ಯನಿರ್ವಹಣೆ ಹಾಗೂ ಕಾರ್ಯಾಚರಣೆ, ಮಲ ತ್ಯಾಜ್ಯ ಸಂಸ್ಕರಣಾ ಘಟಕ ಪರಿಶೀಲಿಸಿದರು.

ಹಾನಗಲ್‌ನಲ್ಲಿ ಬೂದು ನೀರು ನಿರ್ವಹಣೆಗೆ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ನಂತರ ಮೊಳಕಾಲ್ಮೂರು ತಾಪಂನಲ್ಲಿ ಅಧಿಕಾರಿಗಳ ಸಭೆ ನಡೆಸಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ಚಳ್ಳಕೆರೆ ತಾಪಂನಲ್ಲೂ ಅಧಿಕಾರಿಗಳ ಸಭೆ ನಡೆಸಿದರು. ನಗರಂಗೆರೆ ಗಾಪಂ ಶಾಲಾ ಸಮುದಾಯ ಶೌಚಗೃಹ, ಹಳೆಯ ಸ್ವಚ್ಛ ಸಂಕೀರ್ಣ ಘಟಕ, ಹೊಸ ಸ್ವಚ್ಛ ಸಂಕೀರ್ಣ ಘಟಕ ಮತ್ತು ಮಲತ್ಯಾಜ್ಯ ಸಂಸ್ಕರಣ ಘಟಕ ಕಾಮಗಾರಿ ಪರಿಶೀಲನೆ ನಡೆಸಿದರು.

ಹಿರಿಯೂರು ತಾಲೂಕು ವಿವಿ ಪುರದ ಸ್ವಚ್ಛ ಸಂಕೀರ್ಣ ಹಾಗೂ ಮಲ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದರು. ಜಿಪಂ ಸಿಪಿಒ ಸಿ.ಎನ್. ಗಾಯತ್ರಿ, ಸಹಾಯಕ ಯೋಜನಾಧಿಕಾರಿ ಡಿ.ಎಸ್. ಸುಮಾ, ಇಒಗಳಾದ ಹನುಮಂತಪ್ಪ, ಶಶಿಧರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net