

ಕೊಳ್ಳೇಗಾಲ : ತಾಲೂಕಿನ ಹಳೇ ಅಣಗಳ್ಳಿ ಗ್ರಾಮದ ಕಬ್ಬಿನ ಜಮೀನಿನಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಳೆ ಸುಟ್ಟು ಭಸ್ಮವಾಗಿದೆ. ಗ್ರಾಮದ ದೊಡ್ಡಮಾದಯ್ಯ ಎಂಬುವರ ಜಮೀನಿನನಲ್ಲಿ ಬೆಂಕಿ ಹೊತ್ತಿ ಉರಿ ಯುವುದನ್ನು ಕಂಡ ಗ್ರಾಮಸ್ಥರು ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಅಷ್ಟರಾಗಲೇ ಬಹುತೇಕ ಕಬ್ಬು ಸುಟ್ಟು ಕರಕಲಾಗಿತ್ತು. ರೈತರಿಗೆ ಲಕ್ಷಾಂತರ ರೂ.ನಷ್ಟವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸಬೇಕೆಂದು ದೊಡ್ಡಮಾದಯ್ಯ ಒತ್ತಾಯಿಸಿದ್ದಾರೆ.