ಬೆಂಗಳೂರಿಗೆ ಹೊರಟ ಬೃಹತ್ ಪಾದಯಾತ್ರೆ

06M.D.R.2
ಕೃಷಿ ಕೂಲಿಕಾರರ ಕಲ್ಯಾಣ ಮಂಡಳಿ ರಚನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಪಟ್ಟಣದ ಶಿವಪುರದ ಧ್ಜಜ ಸತ್ಯಾಗ್ರಹಸೌಧದಿಂದ ಬೆಂಗಳೂರಿನ ಮುಖ್ಯಮಂತ್ರಿ ನಿವಾಸವರೆಗೆ ಬೃಹತ್ ಪಾದಯಾತ್ರೆ ನಡೆಯಿತು.
Published on

ಮದ್ದೂರು: ಕೃಷಿ ಕೂಲಿಕಾರರ ಕಲ್ಯಾಣ ಮಂಡಳಿ ರಚನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಪಟ್ಟಣದ ಶಿವಪುರದ ಧ್ಜಜ ಸತ್ಯಾಗ್ರಹಸೌಧದಿಂದ ಬೆಂಗಳೂರಿನ ಮುಖ್ಯಮಂತ್ರಿ ನಿವಾಸವರೆಗೆ ಸೋಮವಾರ ಬೃಹತ್ ಪಾದಯಾತ್ರೆ ಹೊರಟಿತು.

ಜಿಲ್ಲೆಯ ಎಲ್ಲ್ಲ ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕೃಷಿ ಕೂಲಿಕಾರ್ಮಿಕರು ಪಾದಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಕೂಲಿಕಾರರ ನೀತಿಗಳ ವಿರುದ್ಧ್ದ ತೀವ್ರ ಆಕ್ರೋಶವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಎಂ.ಪುಟ್ಟಮಾದು ಮಾತನಾಡಿ, ನರೇಗಾ, ವಸತಿ, ಸ್ಮಶಾನ, ಹಕ್ಕುಪತ್ರ, ಬ್ಯಾಂಕ್ ಸಾಲ ಹಾಗೂ ಕೂಲಿಕಾರರ ಕಲ್ಯಾಣ ಮಂಡಳಿಯನ್ನು ರಚಿಸುವಂತೆ ಹಲವಾರು ಬಾರಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿದ್ದರೂ ಸರ್ಕಾರ ಬೇಡಿಕೆಗಳನ್ನು ಈಡೇರಿಸಿಲ್ಲ. ಹೀಗಾಗಿ ಪಾದಯಾತ್ರೆಯ ಮೂಲಕ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೇರಳ, ತಮಿಳುನಾಡು, ತ್ರಿಪುರ ರೀತಿಯಲ್ಲಿ ಕೃಷಿ ಕೂಲಿಕಾರರಿಗೆ ಕಲ್ಯಾಣ ಮಂಡಳಿ ರಚನೆ ಮಾಡಬೇಕು. ನರೇಗಾ ಕೂಲಿಯ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಿ ಪ್ರತಿನಿತ್ಯ 600 ರೂ. ಕೂಲಿ ನೀಡಬೇಕು. ಸರ್ಕಾರಿ ಭೂಮಿಯಲ್ಲಿ ವಾಸ ಮಾಡುತ್ತಿರುವ ಬಡವರಿಗೆ ತಕ್ಷಣ ಹಕ್ಕುಪತ್ರ ನೀಡಬೇಕು. ನಿವೇಶನ ರಹಿತರಿಗೆ ಸೌಲಭ್ಯ ಒದಗಿಸಬೇಕು. ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಹೆಚ್ಚಿಸಬೇಕು. ಯಾವುದೇ ಷರತ್ತು ವಿಧಿಸದೆ ಕೂಲಿಕಾರರಿಗೆ ಕನಿಷ್ಠ 2 ಲಕ್ಷ ರೂ.ವರೆಗೆ ಸಾಲ ನೀಡಬೇಕು. ಸಿಳ್ಳೆಕ್ಯಾತ ಜನಾಂಗಕ್ಕೆ ಜಾತಿ ಪ್ರಮಾಣಪತ್ರ ನೀಡಿ, ಸೌಲಭ್ಯಗಳನ್ನು ಒದಗಿಸಬೇಕು. ಭಾಗ್ಯಜ್ಯೋತಿ, ಕುಠೀರ ಜ್ಯೋತಿ, ದೀನ್ ದಯಾಳ್ ಮತ್ತು ಬೆಳಕು ಯೋಜನೆಯಲ್ಲಿ ಬಡವರಿಗೆ ಉಚಿತವಾಗಿ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರೈತ ಸಂಘ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ, ನಿವೃತ್ತ ವಾರ್ತಾಧಿಕಾರಿ ಬಿ.ವಿಶುಕುಮಾರ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಪಾಧ್ಯಕ್ಷರಾದ ನಿತ್ಯಾನಂದ ಸ್ವಾಮಿ, ಜಿ.ಎನ್. ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರಾ, ಜಿಲ್ಲಾ ಕಾರ್ಯದರ್ಶಿ ಬಿ.ಹನುಮೇಶ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ, ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ, ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಗೌರವಾಧ್ಯಕ್ಷ ಎಂ.ಸಿ.ಬಸವರಾಜು, ಕರ್ನಾಟಕ ಕ್ರಾಂತಿದಳ ಅಧ್ಯಕ್ಷ ಸಿ.ಎಂ.ಕ್ರಾಂತಿಸಿಂಹ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಕಾರ್ಯದರ್ಶಿ ಟಿ.ಯಶವಂತ, ವಿವಿಧ ಸಂಘಟನೆಗಳ ಮುಖಂಡರಾದ ಸಿ.ಕುಮಾರಿ, ವಿ.ಸಿ.ಉಮಾಶಂಕರ್, ಶ್ರೀಕ ಶ್ರೀನಿವಾಸ, ಡಿ.ಸಿ.ಮಹೇಂದ್ರ, ಕೆ.ಹನುಮೇಗೌಡ, ಬಿ.ಎಂ.ಶಿವಮಲ್ಲಯ್ಯ, ಎನ್.ಸುರೇಂದ್ರ, ಅನಿತಾ, ಟಿ.ಪಿ.ಅರುಣ್‌ಕುಮಾರ್, ಟಿ.ಸಿ.ವಸಂತ, ಅಮಾಸಯ್ಯ, ರಾಜು, ಟಿ.ಎಚ್.ಆನಂದ, ಶುಭಾವತಿ, ಸಂತೋಷ್, ಗಾಯಕ ಹುರುಗಲವಾಡಿ ರಾಮಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net