

ಮೈಸೂರು: ಗ್ರಾಮ ಪಂಚಾಯಿತಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿಗೆ ಒತ್ತಾಯಿಸಿ ಫೆ.14 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಬಸವರಾಜು ಹೇಳಿದರು.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರರು, ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿ ಗಳು, ಜವಾನ, ಸ್ವಚ್ಛತಾ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಕನಿಷ್ಠ 25 ಸಾವಿರ ರೂ. ವೇತನ ನಿಗದಿ ಮಾಡಬೇಕು, 6 ಸಾವಿರ ರೂ. ಪಿಂಚಣಿ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು. ನಮ್ಮ ಬೇಡಿಕೆಗೆ ಸ್ಪಂದನೆ ದೊರೆಯುವವರೆಗೆ ಧರಣಿ ಮುಂದುವರೆಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಜಿ. ರಾಮಕೃಷ್ಣ, ನಂಜುಂಡಸ್ವಾಮಿ, ದಿನೇಶ್, ರಂಗರಾಜು ಇದ್ದರು.