

ಚಿತ್ರದುರ್ಗ:ಕರ್ನಾಟಕ ಸಹಕಾರ ಮಾರಾಟ ಮಂಡಳಿಯಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಸಲು ಸರ್ಕಾರದ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ನಿರ್ಧರಿಸಿದೆ. ಕ್ವಿಂಟಾಲ್ 8682 ರೂ.ದರದೊಂದಿಗೆ ಚಿತ್ರ ದುರ್ಗ ಹಾಗೂ ಹೊಸದುರ್ಗದಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರೈತರ ನೋಂದಣಿ ಕಾಲಾವಧಿ 45 ಹಾಗೂ ಖರೀದಿ ಅವಧಿ ಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ. ಜಿಲ್ಲೆಯ ಹೆಸರುಕಾಳು ಬೆಳೆಗಾರರು ಪ್ರತಿ ಎಕರೆಗೆ 2 ಕ್ವಿಂಟಾಲ್,ಗರಿಷ್ಟ 10 ಕ್ವಿಂಟಾಲ್‌ವರೆ ಗೆ ಚಿತ್ರದುರ್ಗ ಹಾಗೂ ಹೊಸದುರ್ಗದಲ್ಲಿ ಪ್ರಾರಂಭಿಸುವ ಖರೀದಿ ಕೇಂದ್ರಕ್ಕೆ ಮಾರಾಟ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.