ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಸಿಎಂಗೆ ಒತ್ತಾಯಿಸುವೆ

IMG_20230125_114325
Published on

ನುಗ್ಗೇಹಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಬೆಲೆ ಯೋಜನೆಯಲ್ಲಿ ಕೊಬ್ಬರಿ ಖರೀದಿ ಜಾರಿಗೆ ತರುವಂತೆ ಒತ್ತಾಯಿಸುವುದಾಗಿ ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.


ಹೋಬಳಿ ಕೇಂದ್ರದ ಎಪಿಎಂಸಿ ಆವರಣದಲ್ಲಿ ಮಂಗಳವಾರ ನಫೆಟ್ ವತಿಯಿಂದ ರಾಗಿ ಖರೀದಿಗೆ ಚಾಲನೆ ನೀಡಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಕೊಬ್ಬರಿ ಬೆಲೆ ಕುಸಿಯುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.


ಸರ್ಕಾರ ಪ್ರತಿ ಕ್ವಿಂಟಾಲ್ ರಾಗಿಗೆ 3570 ರೂ. ನಿಗದಿ ಮಾಡಿದ್ದು, ನುಗ್ಗೇಹಳ್ಳಿ ರಾಗಿ ಕೇಂದ್ರದಲ್ಲಿ ಒಟ್ಟು 7104 ರೈತರು ನೋಂದಣಿ ಮಾಡಿಸಿದ್ದಾರೆ. 93,300 ಕ್ವಿಂಟಾಲ್ ರಾಗಿ ಖರೀದಿಗೆ ಅನುಮತಿ ನೀಡಲಾಗಿದೆ ಎಂದರು.


ಮುಂದಿನ ದಿನಗಳಲ್ಲಿ ಹಿರಿಸಾವೆ ಬಾಗೂರು ಹೋಬಳಿ ಕೇಂದ್ರದಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯುವುದಾಗಿ ತಿಳಿಸಿದರು.


ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಆರ್. ದೊರೆಸ್ವಾಮಿ, ಸಹಾಯಕ ಕೃಷಿ ಅಧಿಕಾರಿ ಜನಾರ್ದನ್, ರಾಜು, ಎಪಿಎಂಸಿ ಕಾರ್ಯದರ್ಶಿ ಮೋಹನ್, ತಾಲೂಕು ಮಾರಾಟ ಮಹಾಮಂಡಲದ ವ್ಯವಸ್ಥಾಪಕ ಚೇತನ್, ಮೇಲ್ವಿಚಾರಕ ಮಂಜುನಾಥ್, ಬಗರ್ ಹುಕುಂ ಕಮಿಟಿ ನಿರ್ದೇಶಕಿ ಛಾಯಾ, ತೋಟಿ ನಾಗರಾಜ್, ಬೆಳಗಳ್ಳಿ ಪುಟ್ಟಸ್ವಾಮಿ, ಪಟೇಲ್ ಕುಮಾರ್, ಎಚ್.ಪಿ ಸಂಪತ್ ಕುಮಾರ್, ಎಂ.ಎಸ್.ಸುರೇಶ್, ಎನ್.ಎಸ್.ಮಂಜುನಾಥ್, ಹೊನ್ನೇಗೌಡ, ನಟರಾಜ್, ಕುಳ್ಳೇಗೌಡ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net