ಬೆಟ್ಟದ ಪ್ರದೇಶವನ್ನು ಅಭಿವೃದ್ಧಿ ಪಡಿಸದೆ ನಿರ್ಲಕ್ಷ್ಯಿಸಲಾಗಿದೆ: ಎಂ.ಟಿ. ಕೃಷ್ಣೇಗೌಡ

ಬೆಟ್ಟದ ಪ್ರದೇಶವನ್ನು ಅಭಿವೃದ್ಧಿ ಪಡಿಸದೆ ನಿರ್ಲಕ್ಷ್ಯಿಸಲಾಗಿದೆ: ಎಂ.ಟಿ. ಕೃಷ್ಣೇಗೌಡ
Published on

ಅರಕಲಗೂಡು: ಪ್ರಸಿದ್ದ ಮಣಜೂರು ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಬೆಟ್ಟದ ಪ್ರದೇಶವನ್ನು ಅಭಿವೃದ್ಧಿ ಪಡಿಸದೆ ನಿರ್ಲಕ್ಷ್ಯಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಎಂ.ಟಿ. ಕೃಷ್ಣೇಗೌಡ ಅಸಮಧಾನ ವ್ಯಕ್ತಪಡಿಸಿದರು.


ತಾಲೂಕಿನ ಮಣಜೂರು - ದಾಸನಪುರ ಗ್ರಾಮದ ಶ್ರೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ಸಮಾರಂದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದ ಅವರು, ಗೊರೂರು ಹೇಮಾವತಿ ಹಿನ್ನೀರು ಪ್ರದೇಶ ಸೇರಿದಂತೆ ಪ್ರಕೃತಿಯ ಮಡಿಲಲ್ಲಿರುವ ಸುಕ್ಷೇತ್ರ ಅಭಿವೃದ್ಧಿ ಕಾಣದಿರುವುದು ಬೇಸರದ ಸಂಗತಿ ಎಂದರು.


ಮಲ್ಲಿಪಟ್ಟಣ ಗ್ರಾಪಂ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಮಾತನಾಡಿ, ಬೆಟ್ಟದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಜಾತ್ರೆ ಪ್ರತಿವರ್ಷ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಸುಕ್ಷೇತ್ರದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯಗಳ ಕೊರತೆ ನೀಗಿಸಲು ಸಾಧ್ಯವಾಗಿಲ್ಲ. ಭಕ್ತರ ಧಾರ್ಮಿಕ ನಂಬಿಕೆಗಳನ್ನು ಗೌರವಿಸಿ, ಬೆಟ್ಟದ ಪ್ರದೇಶವನ್ನು ಅಭಿವೃದ್ಧಿ ಪಡಿಸಿಸರೆ ಉತ್ತಮವಾದ ಪ್ರವಾಸಿ ತಾಣವಾಗಲಿದೆ ಎಂದು ಹೇಳಿದರು.


ಗ್ರಾಪಂ ಸದಸ್ಯರಾದ ಪ್ರಕಾಶ್, ಲಕ್ಷ್ಮಮ್ಮ ಸಣ್ಣಯ್ಯ, ತಾಪಂ ಮಾಜಿ ಅಧ್ಯಕ್ಷ ದೇವರಾಜೇಗೌಡ, ಪರಮೇಶ್, ಗೌತಮ್, ಶಾಂತೇಗೌಡ ಇತರರಿದ್ದರು.

1

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net