

ಬೆಟ್ಟದಪುರ: ಬೆಟ್ಟದಪುರದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸೋಮವಾರ ಬಸವ ಜಯಂತಿ ಹಾಗೂ ಶ್ರೀ ಸಿದ್ಧಗಂಗಾಶ್ರೀಗಳ ಜಯಂತಿ ಆಚರಿಸಲಾಯಿತು.
ಜಯಂತಿ ಹಿನ್ನೆಲೆಯಲ್ಲಿ ಗ್ರಾಮವನ್ನು ಹಸಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ಹಾಗೂ ಸಿದ್ಧಗಂಗಾಶ್ರೀಗಳ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಈ ವೇಳೆ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಗ್ರಾಮದ ಹೃದಯಭಾಗದಲ್ಲಿರುವ ಶ್ರೀ ಪವಾಡ ಬಸವೇಶ್ವರ ದೇವಾಲಯದಲ್ಲಿ ಬಸವೇಶ್ವರ ಸ್ವಾಮಿಗೆ ಎಳನೀರು, ತುಪ್ಪ ಮತ್ತು ಪಂಚಾಮೃತ ಅಭಿಷೇಕ ಮಾಡಿ ಮಳೆಗಾಗಿ ಪ್ರಾರ್ಥಿಸಲಾಯಿತು.ಆಚರಣೆ ಮಾಡಲಾಯಿತು.