ಬೆಟ್ಟದಳ್ಳಿ ಗ್ರಾ.ಪಂ.ಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

18SPT1
Published on


ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೆ.ಜೆ. ತಮ್ಮಯ್ಯ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ವಿಮಲಾಕ್ಷಿ ಆಯ್ಕೆಯಾದರು.


ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಜೋಯಪ್ಪ 3 ಮತಗಳನ್ನು ಪಡೆದರೆ, ಕಾಂಗ್ರೆಸ್ ಬೆಂಬಲಿತ ತಮ್ಮಯ್ಯ 4 ಮತಗಳನ್ನು ಪಡೆದು ಜಯ ಗಳಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ವಿಮಲಾಕ್ಷಿ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಬಿಸಿಎಂ ಇಲಾಖೆಯ ಸ್ವಾಮಿ ಕಾರ್ಯನಿರ್ವಹಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಡಿ.ಇ. ರಮ್ಯಾ, ಡಿ.ಬಿ. ಶಿವಮ್ಮ, ಡಿ.ಆರ್. ಬಸವಕುಮಾರ್, ಕೆ.ಕೆ. ಸಾಕಮ್ಮ ಇದ್ದರು. ಕಾಂಗ್ರೆಸ್ ಪ್ರಮುಖರಾದ ಕೆ.ಎಂ.ಲೋಕೇಶ್, ಕೆ.ಎಸ್.ಹರೀಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net