ಬೆಟ್ಟಳ್ಳಿ ಮಾರಮ್ಮನ ಜಾತ್ರೆ ಯಶಸ್ಸಿಗೆ ಸಹಕರಿಸಿ

12 HANUR 2
ಹನೂರಿನಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಅಂಗವಾಗಿ ಇನ್ಸ್‌ಪೆಕ್ಟರ್ ಶಶಿಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ಲಿಂಗರಾಜು, ಗಿರೀಶ್, ಸಂಪತ್‌ಕುಮಾರ್, ಮಹೇಶ್, ಬಸವರಾಜು ಇತರರು ಇದ್ದರು.
Published on

ಹನೂರು: ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲಾಗುವುದು. ಜಾತ್ರೆಯ ಯಶಸ್ಸಿಗೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ಇನ್ಸ್‌ಪೆಕ್ಟರ್ ಶಶಿಕುಮಾರ್ ಮನವಿ ಮಾಡಿದರು.

ಪಟ್ಟಣ ಪೊಲೀಸ್ ಠಾಣೆಯಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಆಯೋಜಿಸಿದ್ದ ವಿವಿಧ ಸಮುದಾಯದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಾತ್ರಾ ಮಹೋತ್ಸವ ಸುತ್ತಮುತ್ತಲ ಗ್ರಾಮಗಳು, ಪಟ್ಟಣದ ಜನತೆಗೆ ಅತಿ ಮುಖ್ಯವಾದ ಹಬ್ಬವಾಗಿದೆ. ಈ ದಿಸೆಯಲ್ಲಿ ಜಾತ್ರೆ ಮುಗಿಯುವವರೆಗೂ ದೇಗುಲ ಸೇರಿದಂತೆ ಹೆಚ್ಚು ಜನಸಂದಣಿ ಸ್ಥಳದಲ್ಲಿ ಅಗತ್ಯ ಸಿಬ್ಬಂದಿ ನಿಯೋಜಿಸಿ ಬಂದೋಬಸ್ತ್ ಒದಗಿಸಲಾಗುವುದು. ಒಂದು ವೇಳೆ ಜಾತ್ರೆಯಲ್ಲಿ ಶಾಂತಿ ಕದಡುವವರು ಕಂಡು ಬಂದರೆ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶ್ರೀ ಬೆಟ್ಟಳ್ಳಿ ಮಾರಮ್ಮ ಸೇವಾ ಸಮಿತಿ ಕಾರ್ಯದರ್ಶಿ ಲಿಂಗರಾಜು, ಎಎಎಸ್‌ಐ ಲಿಂಗರಾಜು, ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಸಂಪತ್‌ಕುಮಾರ್, ಮಾಜಿ ಸದಸ್ಯರಾದ ಬಸವರಾಜು, ಮಾದೇಶ್, ಮುಖಂಡರಾದ ಪ್ರದೀಪ್‌ಕುಮಾರ್, ಮಹೇಶ್, ರವಿ, ಪ್ರಕಾಶ್, ಸಿದ್ದರಾಜು, ಮಲ್ಲಿಕಾರ್ಜುನ, ಸಾಗರ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net