ಬೆಟ್ಟಳ್ಳಿ ಮಾರಮ್ಮನಿಗೆ ಅಮಾವಾಸ್ಯೆ ಪೂಜೆ

21 HANUR 2.
Published on

ಹನೂರು: ಪಟ್ಟಣದ ಅದಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಮಂಗಳವಾರ ಯುಗಾದಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.


ದೇಗುಲವನ್ನು ತಳಿರು-ತೋರಣದಿಂದ ಸಿಂಗಾರ ಮಾಡಲಾಗಿತ್ತು. ದೇವಿಗೆ ಬೆಳಗಿನ ಜಾವ 4.30ರಲ್ಲಿ ಪನ್ನೀರು, ಎಳನೀರು, ಅರಿಶಿಣ, ಕುಂಕುಮ, ಜೇನುತುಪ್ಪ, ಹಾಲು ಹಾಗೂ ಗಂಧದ ಅಭಿಷೇಕ ನೆರವೇರಿಸಲಾಯಿತು. ವಿಗ್ರಹ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆ ನೆರವೇರಿಸಿ ದೀಪಧಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.


ಪಟ್ಟಣ ಸೇರಿದಂತೆ ಭೈರನತ್ತ, ಉದ್ದನೂರು, ಮಾಲಾಪುರ, ಅಜ್ಜೀಪುರ, ಚಿಂಚಳ್ಳಿ, ಮಣಗಳ್ಳಿ, ಚಂಗವಾಡಿ, ಮಂಗಲ, ಆರ್.ಎಸ್.ದೊಡ್ಡಿ ಹಾಗೂ ಈ ಭಾಗದ ಇನ್ನಿತರ ಕಡೆಗಳಿಂದ ಆಗಮಿಸಿದ್ದ ಭಕ್ತರು ದೇವಿಯ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇಗುಲದ ಮುಂಭಾಗದಲ್ಲಿ ಉಪ್ಪು ಸುರಿದು ಹರಕೆ ಸಲ್ಲಿಸಿ ಭಕ್ತಿ ಅರ್ಪಿಸಿದರು. ದೇಗುಲದ ವತಿಯಿಂದ ಪ್ರಸಾದ ವಿತರಿಸಲಾಯಿತು.

ಅರ್ಚಕರಾದ ರಾಜೋಜಿರಾವ್ ಸಿಂಧೆ ಹಾಗೂ ಜಯಂತ್‌ರಾವ್ ಸಿಂಧೆ ಪೂಜಾ ಕೈಂಕರ್ಯ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net