ಬೆಟ್ಟಿಂಗ್ ಹಾವಳಿಗೆ ಕಡಿವಾಣ ಹಾಕಿ

30KMD-1
Published on

ಕೆ.ಎಂ.ದೊಡ್ಡಿ: ಗಾಂಜಾ ಸೇರಿದಂತೆ ಐಪಿಎಲ್ ಬೆಟ್ಟಿಂಗ್ ಹಾವಳಿ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಆಶಯ್ ಮಧು ಮಾದೇಗೌಡ ಮನವಿ ಮಾಡಿದರು.


ಐಪಿಎಲ್ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರಿಂದಲೇ ಹತ್ಯೆಯಾಗಿದ್ದ ಚಿಕ್ಕರಸಿಕೆರೆ ಗ್ರಾಮದ ಪುನೀತ್ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


ಇತ್ತೀಚೆಗೆ ಯುವ ಜನತೆ ಸಮಾಜಘಾತಕ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದು, ಮೋಜು-ಮಸ್ತಿಗಾಗಿ ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುವ ಮೂಲಕ ಗಾಂಜಾ, ಅಫೀಮು ಇನ್ನಿತರ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಅಪರಾಧ ಪ್ರಕರಣಗಳು ಸಹ ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದರು.
ಐಪಿಎಲ್ ಬೆಟ್ಟಿಂಗ್ ಹೆಚ್ಚಾಗಿದ್ದು, ಇದರಿಂದ ಯುವ ಜನತೆ ಮಾನಸಿಕ ಖಿನ್ನತೆಗೊಳಗಾಗುತಿದ್ದು, ಪಾಲಕರು ತಮ್ಮ ಮಕ್ಕಳ ಚಲನವಲನ ಗಮನಿಸಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಿ ಎಂದು ಕಿವಿಮಾತು ಹೇಳಿದರು.


ಈ ಸಂದರ್ಭದಲ್ಲಿ ಮೃತ ಪುನೀತ್ ತಂದೆ ರಾಜೇಂದ್ರ, ತಾಯಿ ವಸಂತ ಮತ್ತು ಸಹೋದರ ಅಜಿತ್ ಅವರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು.


ತಾ.ಪಂ.ಮಾಜಿ ಸದಸ್ಯ ಭರತೇಶ್, ಬಿ.ಗಿರೀಶ್, ಅಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆರ್.ಸಿದ್ದಪ್ಪ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಪ್ರಕಾಶ್, ಗ್ರಾಪಂ ಸದಸ್ಯರಾದ ಪ್ರಭು, ಸಣ್ಣಪ್ಪ, ಚಿಕ್ಕಬೋರಯ್ಯ, ಮುಖಂಡರಾದ ಮಹದೇವು, ವಿಜಯ್ ಜೋಗೀಗೌಡ, ಯಜಮಾನ್ ಶಿವಲಿಂಗೇಗೌಡ ಸೇರಿದಂತೆ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net