ಬೆತ್ತಲೆ ಮೆರವಣಿಗೆ; ಇಡೀ ದೇಶವೇ ತಲೆ ತಗ್ಗಿಸುವ ಘಟನೆ

ಬೆತ್ತಲೆ ಮೆರವಣಿಗೆ; ಇಡೀ ದೇಶವೇ ತಲೆ ತಗ್ಗಿಸುವ ಘಟನೆ
Published on

 ಹಾಸನ: ಮಣಿಪುರದಲ್ಲಿ ನಡೆದ ಬುಡಕಟ್ಟು ಸಮುದಾಯದ ಮಹಿಳೆಯ ಬೆತ್ತಲೆ ಮೆರವಣಿಗೆಯನ್ನು ಮಾನವ ಹಕ್ಕುಗಳ ಹೋರಾಟ ಸಮಿತಿಯ ಖಂಡಿಸುತ್ತದೆ ಎಂದು ಸಮಿತಿ ಅಧ್ಯಕ್ಷ ಮರಿ ಜೋಸೆಫ್ ಹೇಳಿದರು.

ಮಣಿಪುರದ ಪ್ರಕರಣ ಇಡೀ ದೇಶವೇ ತಲೆ ತಗ್ಗಿಸುವಂತಹ ದುಷ್ಕೃತ್ಯವಾಗಿದೆ. ಇದು ಅಲ್ಲಿನ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಖಂಡನೆ ವ್ಯಕ್ತಪಡಿಸಿದರು.

ಮಣಿಪುರದ ಪ್ರಕರಣ ಬುಡಕಟ್ಟು ಸಮುದಾಯದ ರಾಷ್ಟ್ರಪತಿ ಮುರ್ಮು ಅವರಿಗೆ ಮಾಡಿದ ಅಪಮಾನ ಆಗಿದೆ. ಬೇಟಿ ಬಚಾವೋ ಬೇಟಿ ಪಡಾವೋ ಎಂಬ ಮಾತನ್ನು ಹೇಳುವ ಬಿಜೆಪಿ ಸರ್ಕಾರದ ಕೇಂದ್ರ ಸಚಿವರು, ಶಾಸಕರು ಮಹಿಳೆಯರ ಮೇಲೆ ಪೈಶಾಚಿಕ ಕೃತ್ಯ ನಡೆದರೂ ಈ ಬಗ್ಗೆ ಧ್ವನಿ ಎತ್ತದೆ ಇರುವುದು ವಿಪರ್ಯಾಸ. ಅಲ್ಲದೆ ಅಲ್ಲಿನ ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ನಡೆಸಿದ ಹುನ್ನಾರ ನಾಚಿಕೆಗೇಡಿನ ಸಂಗತಿ. ಈ ಘಟನೆಯ ಸಂಪೂರ್ಣ ಹೊಣೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಹೊರಬೇಕಾಗುತ್ತದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ಸಂಘಟನೆಗಳ ಮುಖಂಡರಾದ ರಂಗಸ್ವಾಮಿ, ಅಂಬುಗ ಮಲ್ಲೇಶ್, ತೋಟೆಶ್ ನಿಟ್ಟೂರು, ಹೂ ರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net