ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ

07-09-Shiva-2
ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಮುಂದೆ ಸಿಪಿಐಎಂನಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಪದಾಕಾರಿಗಳಾದ ಡಿ.ಎಸ್.ಶರಣಬಸವ, ಎಚ್.ಪದ್ಮಾ, ಕರಿಯಪ್ಪ ಅಚ್ಚೊಳ್ಳಿ, ವರಲಕ್ಷ್ಮಿ, ರಮೇಶ, ಜಿಲಾನಿಪಾಷಾ, ಗೋಕರಮ್ಮ, ಗಂಗಮ್ಮ, ಎಸ್.ಲಕ್ಷ್ಮಿ, ಇಂದಿರಾ ಇದ್ದರು.
Published on

ರಾಯಚೂರು: ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಠಿಸಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಸಿಪಿಐಎಂನಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಬಡ ಜನತೆ ಬೆಲೆ ಏರಿಕೆಯಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಉದಾರೀಕರಣ ನೀತಿಗಳಿಂದ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ ಎಂದು ದೂರಿದರು.
ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್, ವಿದ್ಯುತ್, ಕೃಷಿ ಹೂಡಿಕೆಗಳಾದ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ಕೀಟ ನಾಶಕ, ಕೃಷಿ ಉಪಕರಣಗಳು, ಔಷಧ ಬೆಲೆಗಳು ಗಗನಮುಖಿಯಾಗಿವೆ. ಸರ್ಕಾರ ಅಗತ್ಯ ವಸ್ತುಗಳ ಬೆಲೆಗಳ ಮೇಲಿನ ನಿಯಂತ್ರಣ ವಾಪಸ್ ಪಡೆದಿದೆ.
ಸಹಾಯಧನವನ್ನು ಕಡಿತ ಮಾಡಿರುವುದು ಮುಕ್ತ ವ್ಯಾಪಾರಕ್ಕೆ ದೇಶವನ್ನು ತೆರೆದಿಡಲಾಗಿದ್ದು, ಕೇಂದ್ರ ಸರ್ಕಾರ ಕಾಳಸಂತೆಕೋರತನಕ್ಕೆ ಕುಮ್ಮಕ್ಕು ನೀಡಿರುವುದು ಕಾರಣವಾಗಿದೆ. ಕೇಂದ್ರ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು. ಖಾಲಿ ಇರುವ ಎಲ್ಲ ಉದ್ಯೋಗಗಳನ್ನು ಭರ್ತಿ ಮಾಡಬೇಕು.
ಉದ್ಯೋಗ ನೀಡುವವರೆಗೆ ನಿರುದ್ಯೋಗಿ ಭತ್ಯೆ ನೀಡಬೇಕು. ಅನ್ನಭಾಗ್ಯಕ್ಕೆ ಹೆಚ್ಚುವರಿ 5 ಕೆ.ಜಿ. ಅಕ್ಕಿಯನ್ನು ಒದಗಿಸಬೇಕು. ವಿದ್ಯುತ್ ರಂಗದ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ವಿಧಾನವನ್ನು ನಿಲ್ಲಿಸಬೇಕು. ರಾಜ್ಯ ಮತ್ತು ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಣೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಪದಾಕಾರಿಗಳಾದ ಡಿ.ಎಸ್.ಶರಣಬಸವ, ಎಚ್.ಪದ್ಮಾ, ಕರಿಯಪ್ಪ ಅಚ್ಚೊಳ್ಳಿ, ವರಲಕ್ಷ್ಮಿ, ರಮೇಶ, ಜಿಲಾನಿಪಾಷಾ, ಗೋಕರಮ್ಮ, ಗಂಗಮ್ಮ, ಎಸ್.ಲಕ್ಷ್ಮಿ, ಇಂದಿರಾ, ಮೌಲಪ್ಪ, ವೀರೇಶ, ಕುರುಮಪ್ಪ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net