ಬೆಲೆ ಏರಿಕೆ ನಿಯಂತ್ರಿಸದ ಕೇಂದ್ರ ಸರ್ಕಾರ

nagamangala
ನಾಗಮಂಗಲದ ತಾಲೂಕು ಆಡಳಿತಸೌಧ ಮುಂಭಾಗ ಭಾರತ್ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹನುಮೇಶ್, ಪ್ರೇಮಮ್ಮ, ಶಾಂತಮ್ಮ, ಜಯಲಕ್ಷ್ಮೀ, ಲತಾ, ರಮೇಶ್ ಮತ್ತಿತರಿದ್ದರು.
Published on

ನಾಗಮಂಗಲ: ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಭಾರತ್ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್ ವಾದಿ) ವತಿಯಿಂದ ಪಟ್ಟಣದ ತಾಲೂಕು ಆಡಳಿತಸೌಧ ಮುಂಭಾಗ ಗುರುವಾರ ಪ್ರತಿಭಟನೆ ನಡೆಯಿತು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಭರತ್‌ರಾಜ್ ಮಾತನಾಡಿ, ಶೋಷಿತ, ದುಡಿಯುವ ವರ್ಗ ಹಾಗೂ ಯುವ ಸಮೂಹವನ್ನು ರಕ್ಷಣೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಹಾಗೂ ಸರ್ಕಾರಿ ಸ್ವಾಮ್ಯದಲ್ಲಿರುವ ಅನೇಕ ಇಲಾಖೆ, ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿದ್ದು ಖಾಸಗಿ ಉದ್ಯಮಿಗಳನ್ನು ಬೆಳೆಸುವ ಕೆಲಸವನ್ನು ಕೇಂದ್ರ ಮಾಡುತ್ತಿದೆ ಎಂದು ಕಿಡಿಕಾರಿದರು.

ಜನರ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವಲ್ಲಿ ಬಿಜೆಪಿಯವರು ನಿಸ್ಸೀಮರು. ಇದೇ ರೀತಿ ಪ್ರತಿ ಬಾರಿಯೂ ದೇಶದ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದರು.

ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಹನುಮೇಶ್, ತಾಲೂಕು ಮುಖಂಡರಾದ ಪ್ರೇಮಮ್ಮ, ಶಾಂತಮ್ಮ, ಜಯಲಕ್ಷ್ಮೀ, ಲತಾ, ರಮೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net