ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಏ. ೫ಕ್ಕೆ

1 ckm 1 devaraja shetty
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ
Published on

ಚಿಕ್ಕಮಗಳೂರು: ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿಯಿಂದ ಏ. ೫ರಂದು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಟ್ಟಿನಿಂದ ನಾವಿನವರೆಗೆ ಬೆಲೆ ಏರಿಕೆ ಮಾಡಿರುವ ಅಪಕೀರ್ತಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನೂ ಮೂರು ರೂ. ಏರಿಕೆ ಮಾಡುವ ಮೂಲಕ ಬೆಲೆ ಏರಿಕೆಯ ಶುಭಾರಂಭ ಮಾಡಿದ ರಾಜ್ಯ ಸರ್ಕಾರ ಬಳಿಕ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಇದೀಗ ಹಾಲಿನ ದರವನ್ನು ನಾಲ್ಕು ರೂ. ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು ಕಳೆದ ಎರಡು ವರ್ಷದಲ್ಲಿ ಒಂಭತ್ತು ರೂ. ಹೆಚ್ಚಳ ಮಾಡಲಾಗಿದೆ. ಹೆಚ್ಚಳ ಮಾಡಿರುವ ಹಾಲಿನ ದರವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಈ ಎಲ್ಲ ವಿಷಯಗಳನ್ನಿಟ್ಟುಕೊಂಡು ಏ. ೫ರಂದು ಜಿಲ್ಲೆಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.

ರಾಜ್ಯದ ಹಾಲು ದರವನ್ನು ಇತರ ರಾಜ್ಯಗಳ ಹಾಲು ದರಕ್ಕೆ ಹೋಲಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಹಾಲು ದರ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದೆ. ಹೀಗೆ ಸಮರ್ಥನೆ ಮಾಡಿಕೊಳ್ಳುವ ರಾಜ್ಯ ಸರ್ಕಾರ ರಾಜ್ಯದ ಇಂಧನ ಬೆಲೆಯನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳಾದ ಗುಜರಾತ್, ಯುಪಿ, ಹರಿಯಾಣ, ಗೋವಾ ಹಾಗೂ ಪಾಂಡಿಚೆರಿ ರಾಜ್ಯಗಳಿಗೆ ಹೋಲಿಕೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಏ. ೨ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಈ ಧರಣಿಯಲ್ಲಿ ಚಿಕ್ಕಮಗಳೂರಿನ ಕನಿಷ್ಟ ೧೦೦೦ ಕಾರ್ಯಕರ್ತರು ಭಾಗವಹಿಸಲಿz್ದೆÃವೆ ಎಂದರು.

ಏ. ೬ರಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಆಚರಿಸಲಿz್ದÉÃವೆ. ಅಂದು ಪ್ರತಿ ಬೂತ್ ಅಧ್ಯಕ್ಷರ ಮನೆ ಮೇಲೆ ಧ್ವಜ ಹಾರಿಸಲಾಗುವುದು. ಬಳಿಕ ಸ್ಥಳೀಯವಾಗಿ ಎಲ್ಲೆಡೆಯೂ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕಾಗಿ ಸಮಿತಿ ರಚನೆ ಮಾಡಲಾಗಿದೆ ಎಂದರು.

ಏ. ೧೦ರಂದು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ರ‍್ಯಾಲಿಯನ್ನು ಚಿಕ್ಕಮಗಳೂರಿನಲ್ಲಿ ನಡೆಸಲಾಗುವುದು. ಅಂದು ಎರಡು ಕಿಲೋಮೀಟರ್ ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಲಾಗುವುದು ಎಂದು ಹೇಳಿದರು.

ಏ. ೧೪ರಂದು ಅಂಬೇಡ್ಕರ್ ಜಯಂತಿಯನ್ನು ಜಿಲ್ಲೆಯ ಉದ್ದಗಲಕ್ಕೂ ವಿಜೃಂಭಣೆಯಿAದ ಆಚರಿಸಲಿz್ದÉÃವೆ. ಅಂಬೇಡ್ಕರ್ ಜಯಂತಿಯAದು ಕೇಂದ್ರ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ವಿಜೃಂಭಣೆಯಿAದ ಅಂಬೇಡ್ಕರ್ ಜಯಂತಿ ಆಚರಿಸಲು ನಿರ್ಧರಿಸಿz್ದÉÃವೆ. ಇದಕ್ಕಾಗಿ ಸೀತಾರಾಮ ಭರಣ್ಯ ಹಾಗೂ ಕೆ.ಪಿ.ವೆಂಕಟೇಶ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕೆ.ಎಸ್.ಪುಷ್ಪರಾಜ್, ಹಿರೇಮಗಳೂರು ಪುಟ್ಟಸ್ವಾಮಿ, ಸೀತಾರಾಮ ಭರಣ್ಯ, ಕನಕರಾಜ ಅರಸ್, ರವಿ ಕುಮಾರ್, ಎಸ್.ಕೆ.ಮಂಜು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net